ರಾಜೀವ್‌ಗಾಂಧಿ ವಸತಿ ಯೋಜನೆಯಡಿ ವಿತರಣೆ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ವಿವಿಧ ವಸತಿ ಯೋಜನೆಗಳಡಿ ಫಲಾನುಭವಿಗಳು ಸ್ವಂತ ಸೂರಿನ ಕನಸನ್ನು ನನಸಾಗಿಸಿಕೊಳ್ಳಲು ದಿನಗಣನೆ ಆರಂಭವಾಗಿದ್ದು ಜಿಲ್ಲಾಡಳಿತ ಕೆಲವೇ ದಿನಗಳಲ್ಲಿ ಲಾನುಭವಿಗಳಿಗೆ ನಿವೇಶನ ಹಂಚಲು ಸಿದ್ದತೆ ನಡೆಸಿದೆ.
ಗಾಜೀವ್‌ಗಾಂಧಿ ವಸತಿ ಯೋಜನೆಯಡಿ ಜಿಲ್ಲೆಯಲ್ಲಿ 8 ಸಾವಿರ ನಿವೇಶನಗಳನ್ನು ಕಾಯ್ದಿರಿಸಿದೆ. ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ಕೆಲವೇ ದಿನಗಳಲ್ಲಿ ದೇವನಹಳ್ಳಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಕೆಲಸವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಕಳೆದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಾಗೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಲವು ಕಡೆಗಳಲ್ಲಿ ನಿವೇಶನ ಹಂಚಿಕೆಗೆ ಸಿದ್ದತೆ ಮಾಡಿಕೊಳ್ಳಲಾಗಿತ್ತು. ನಂತರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ 8 ಸಾವಿರ ನಿವೇಶನಗಳನ್ನು ಕಾಯ್ದಿರಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಆಯಾ ಗ್ರಾಮ ವ್ಯಾಪ್ತಿಯಲ್ಲಿ ಹಂಚಿಕೆಯಾಗಲಿದೆ ಇದಕ್ಕೆ ಸಕಲ ಸಿದ್ದತೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಹಾಗೂ ಹೊಸಕೋಟೆ ತಾಲೂಕುಗಳನ್ನೊಳಗೊಂಡ ಗ್ರಾಮಾಂತರ ಜಿಲ್ಲೆಯಲ್ಲಿ ಕಳೆದ 15 ವರ್ಷಗಳಿಂದ ನಿವೇಶನಕ್ಕಾಗಿ ಜನ ಜಾತಕ ಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಸರ್ಕಾರದ ಹಲವು ಯೋಜನೆಗಳಡಿ ನಿವೇಶನ ವಸತಿಗಾಗಿ ಅರ್ಜಿಗಳನ್ನು ಹಾಕಿ ಕುಳಿತರೂ ಇದುವರೆಗೆ ಕನಸು ನನಸಾಗಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದರ ನಡುವೆ ಈ ಬಾರಿ ವಸತಿ ವಿತರಣೆಗೆ ಜಿಲ್ಲಾಡಳಿತ ಮುಂದಾಗಿರುವುದು ಈ ಬಾರಿಯಾದರೂ ಬಡಜನರ ಕನಸು ನನಸಾಗಲಿದೆ ಎಂಬ ಭರವಸೆ ಮೂಡಿಸಿದೆ.
ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಕೆ.ಎಚ್.ಮುನಿಯುಪ್ಪ ಮುಂದಿನ ಸಾಲಿನಲ್ಲಿ 10 ಸಾವಿರ ನಿವೇಶನ ಹಂಚುವ ಗುರಿಯೊಂದಿಗೆ ನಿವೇಶನ ಗುರುತಿಸುವ ಹಾಗೂ ಲಾನುಭವಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿದೆ.
ರಾಜೀವ್‌ಗಾಂಧಿ ವಸತಿ ಯೋಜನೆಯಡಿ 8 ಸಾವಿರ ನಿವೇಶನ ಹಂಚಿಕೆಗೆ ಯೋಜನೆಯಡಿ ಅನುದಾನವೂ ಬಿಡುಗಡೆಯಾಗಿದ್ದು, ಯೋಜನೆಯ ಪ್ರಕ್ರಿಯೆ ಅನುಸಾರ ಹಕ್ಕುಪತ್ರ ವಿತರಣೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜೀವ್‌ಗಾಂಧಿ ವಸತಿ ಯೋಜನೆಯಡಿ ಜಿಲ್ಲೆಯಲ್ಲಿ 8 ಸಾವಿರ ನಿವೇಶನಗಳನ್ನು ಕಾಯ್ದಿರಿಸಿಲಾಗಿದೆ, ಅರ್ಹ ಲಾನುಭವಿಗಳನ್ನು ಗುರುತಿಸಿದ್ದು, ಶೀಘ್ರದಲ್ಲೇ ಅವರಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಲಾಗುವುದು. ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಯೋಜನೆ ಅನುಷ್ಠಾನಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಎ.ಬಿ.ಬಸವರಾಜು, ಜಿಲ್ಲಾಧಿಕಾರಿ ಬೆಂ.ಗ್ರಾಮಾಂತರ