ನೆಲಮಂಗಲ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್​ಗಳಲ್ಲಿ ಸುಮಾರು 2.5 ರೂ. ಕೋಟಿ ವೆಚ್ಚದಲ್ಲಿ ಕಾಂಕ್ರೀಟ್​ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್​.ಶ್ರೀನಿವಾಸ್​ ಚಾಲನೆ ನೀಡಿದರು. ನಗರಸಭೆ ಅಧ್ಯಕ್ಷ ಎನ್​.ಗಣೇಶ್​, ಉಪಾಧ್ಯಕ್ಷ ಆನಂದ್​, ನಿಟಕಪೂರ್ವ ಅಧ್ಯಕ್ಷೆ ಪೂರ್ಣಿಮಾ ಸುಗ್ಗರಾಜು, ಸದಸ್ಯ ಸಿ.ಪ್ರದಿಪ್​, ಪದ್ಮನಾಭ, ಪುರುಷೋತ್ತಮ್​, ಪೌರಾಯುಕ್ತ ಗಂಗಾಧರ್​ ಇತರರು ಇದ್ದರು. 
ಬೆಂಗಳೂರು ಗ್ರಾಮಾಂತರ

ಕಾಮಗಾರಿಯಲ್ಲಿ ಲೋಪಕಂಡರೆ ಕ್ರಮ

ಪ್ರಮುಖ ಮುಖ್ಯಾಂಶಗಳು

  • ಕಾಮಗಾರಿಯಲ್ಲಿ ಲೋಪಕಂಡರೆ ಕ್ರಮ
ನೆಲಮಂಗಲ: ಗುತ್ತಿಗೆದಾರರು ಕಾಮಗಾರಿ ಕೈಗೊಂಡಸ್ಥಳದಲ್ಲಿನ ಜನರ ವಿಶ್ವಾಸಗಳಿಸುವುದರ ಜತೆಗೆ ಅವರ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಬೇಕು, ಕಾಮಗಾರಿಗಳಿಗೆ ಗುಣಮಟ್ಟದ ಸಾಮಗ್ರಿಗಳನ್ನೇ ಬಳಸಬೇಕು ಎಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಶಾಸಕ ಎನ್​.ಶ್ರೀನಿವಾಸ್​ ಸೂಚಿಸಿದರು.
ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್​ಗಳಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್​ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ನಗರಸಭೆ ವ್ಯಾಪ್ತಿಯಲ್ಲಿ ನಗರಸಭೆ ಅನುದಾನ, ನಗರೋತ್ಥಾನ ಯೋಜನೆಯಡಿ, ಮುಖ್ಯಮಂತ್ರಿಗಳ ಅನುದಾನ, ನೆ.ಯೋ.ಪ್ರಾಧಿಕಾರ ಅನುದಾನ, ಶಾಸಕರ ವಿಶೇಷ ಅನುದಾನ ಸೇರಿ ಈಗಾಗಲೇ ಸಾವಿರಾರು ಕೋಟಿ ರೂ. ವೆಚ್ಚದ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಕಲೆವು ಈಗಾಗಲೇ ಪೂರ್ಣಗೊಂಡಿದೆ. ಆದರೆ ಕಾಮಗಾರಿಯಲ್ಲಿ ಲೋಪ ಕಂಡು ಬಂದರೆ ಸ್ಥಳಿಯರು ನನ್ನನ್ನು ಸಂಪರ್ಕಿಸಿ ತಿಳಿಸಿದರೆ, ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.
ನೆ.ಯೋ.ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ನಾಗರಾಜು, ಮಾಜಿ ಅಧ್ಯಕ್ಷ ಎಂ.ನಾರಾಯಣಗೌಡ, ಮಾಜಿ ಸದಸ್ಯ ಬಿ.ಜಿ.ವಾಸು, ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಮಂಜುನಾಥ್​, ಗ್ರಾಪಂ ಮಾಜಿ ಸದಸ್ಯ ಲಕ್ಷಿ$್ಮನಾರಾಯಣ್​, ಚಂದ್ರಕುಮಾರ್​, ಮುಖಂಡ ನಾರಾಯಣರಾವ್​, ಕೆ.ವಸಂತ್​, ಮುನಿರಾಜು, ರವಿಕುಮಾರ್​, ಮುನಿಯಪ್ಪ, ಕೃಷ್ಣಪ್ಪ, ನರಸಿಂಹಮೂರ್ತಿ, ಮುರಳಿ, ಬೈಲಮೂರ್ತಿ, ಮೋಹನ್​, ಪ್ರಸನ್ನ ಇತರರು ಇದ್ದರು.
ಸೇತುವೆ ಕಾಮಗಾರಿ ಪರಿಶೀಲನೆ: ನೆಲಮಂಗಲ: ನಗರದ ಶೇಷು ಬಡಾವಣೆ ಬಳಿ ರಾಜಕಾಲುವೆಗೆ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ಶಾಸಕ ಎನ್​.ಶ್ರೀನಿವಾಸ್​ ಸೋಮವಾರ ಭೇಟಿ ನೀಡಿ, ಪರಿಶೀಲಿಸಿದರು.
ನಗರದ ಮುಖ್ಯರಸ್ತೆಯಿಂದ ಜ್ಯೋತಿನಗರ ಮಾರ್ಗವಾಗಿ ವಾಜರಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಡ್ಡಲಾಗಿದ್ದ ರಾಜಗಾಲುವೆ ಸೇತುವೆ ಶಿಥಿಲಗೊಂಡಿತ್ತು. ಜತೆಗೆ ಕಿರಿದಾದ ಸೇತುವೆಯಿಂದಾಗಿ ಮಳೆಗಾಲದಲ್ಲಿ ಅವಾಂತರ ಸೃಷ್ಠಿಯಾಗುತ್ತಿದ್ದನ್ನು ಮನಗಂಡ ಶಾಸಕರು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದರು.
ಶೇಷು ಬಡಾವಣೆಯಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಯ ಭೂಮಿ ಪೂಜೆಗೆ ಆಗಮಿಸಿದ್ದ ಶಾಸಕರು ಸಮೀಪದಲ್ಲೇ ನಡೆಯುತ್ತಿರುವ ರಾಜಕಾಲುವೆ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ನಗರಸಭೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ಬಳಿ ಮಾಹಿತಿ ಪಡೆದರು.
ಸದಸ್ಯರ ಮನವಿ: ವಾಜರಹಳ್ಳಿ ಹಾಗೂ ಸುತ್ತಲಿನ ಹತ್ತಾರು ವಸತಿ ಬಡಾವಣೆಗಳ ಜನರು, ಶಾಲಾ&ಕಾಲೇಜು ವಿದ್ಯಾರ್ಥಿಗಳು ಶಾಲಾ ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಇದ್ದು, ಶ್ರೀದಲ್ಲಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿಕೊಡಬೇಕು ಎಂದು ನಗರಸಭೆ ಸದಸ್ಯೆ ಪೂರ್ಣಿಮಾ ಸುಗ್ಗರಾಜು ಶಾಸಕರಲ್ಲಿ ಮನವಿ ಮಾಡಿದರು.
ಮಳೆಗಾಲದಲ್ಲಿ ರಾಜಕಾಲುವೆ ತುಂಬಿ ಅವಾಂತರ ಸೃಷ್ಠಿಯಾಗುತ್ತಿತ್ತು. ಇದನ್ನು ಮನಗಂಡು ರಾಜಕಾಲುವೆಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿ ನಿರ್ವಹಿಸಿ, ಶ್ರೀದಲ್ಲೇ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು.
- ಎನ್​. ಶ್ರೀನಿವಾಸ್​, ಶಾಸಕ, ನೆಲಮಂಗಲ