ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ 
ಬೆಂಗಳೂರು ಗ್ರಾಮಾಂತರ

ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ(devanahalli) ಪಟ್ಟಣದ ಕ್ರೀಡಾಂಗಣ ಮತ್ತು ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ಸಂಬಂಧಿಸಿದಂತೆ 13.46 ಕೋಟಿ ರೂ.ವೆಚ್ಚದ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಕುರಿತು ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷೆತೆಯಲ್ಲಿ ಚರ್ಚೆ ನಡೆಯಿತು.
ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಸಭೆಯಲ್ಲಿ ಸಚಿವರು ಅನುದಾನ ಬಿಡುಗಡೆ ಕುರಿತು ಮಾಹಿತಿ ನೀಡಿದರು. ಕ್ರಿಡಾಂಗಣದ ಅಭಿವೃದ್ಧಿಗೆ 2 ಕೋಟಿ ರೂ. ಸ್ಥಳೀಯ ಶಾಸಕರ ಪ್ರದೇಶಾಭಿರುದ್ಧಿ ಅನುದಾನ, 6.42 ಕೋಟಿ ರೂ. ಸಿಎಸ್‌ಆರ್ ಅನುದಾನ ಒದಗಿಸಲಾಗುತ್ತಿದ್ದು, ಬಾಕಿ 5 ಕೋಟಿ ರೂ.ಗಳ ಅನುದಾನವನ್ನು 2025-26 ನೇ ಸಾಲಿನ ಆಯವ್ಯಯದಲ್ಲಿ ಒದಗಿಸುವಂತೆ ಹಾಗೂ 5 ಕೋಟಿ ರೂ.ಗಳ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡಲು ಸಭೆಯಲ್ಲಿ ಚರ್ಚಿಸಲಾಯಿತು. ಕ್ಷೇತ್ರದ ಜನರ ಬಹುದಿನ ಒತ್ತಾಸೆಯಾಗಿತ್ತು, ಅಲ್ಲದೆ ಕ್ರೀಡಾಸಕ್ತರ ಪ್ರೋತ್ಸಾಹಕ್ಕೆ ಉತ್ತಮ ವೇದಿಕೆಯ ಅವಶ್ಯಕತೆ ಇತ್ತು. ಈ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಅನುಮೋದನೆ ಕುರಿತು ಚರ್ಚೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.