ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 111 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅಧಿಕಾರಿಗಳಿಗೆ ಸೂಚಿಸಿದರು.
ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಆ. 20 ರಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ದೇವನಹಳ್ಳಿ ಟೌನ್‌ನ ದೇವರಾಜ ಅರಸು ಭವನದಲ್ಲಿ ಆಚರಿಸಲಾಗುತ್ತದೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮದ ವೇದಿಕೆ ಅಲಂಕಾರ, ಕಲಾ ತಂಡಗಳು, ಪಲ್ಲಕ್ಕಿ, ಉಪಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಸನ್ಮಾನ, ಉಪನ್ಯಾಸ, ಆಂಬುಲೆನ್ ವ್ಯವಸ್ಥೆ ಸೇರಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದ ಎಡಿಸಿ ಸಂಘ ಸಂಸ್ಥೆಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.