ನೆಲಮಂಗಲ : ಭಗತ್ ಸಿಂಗ್ ಚಿಕ್ಕ ವಯಸ್ಸಿನಲ್ಲಿಯೇ ದೇಶದ ಸ್ವಾತಂತ್ರ್ಯಕ್ಕಾಗಿ ಅಪಾರ ಧೈರ್ಯ ಮತ್ತು ದೇಶಪ್ರೇಮವನ್ನು ಪ್ರದರ್ಶಿಸಿದ ಕ್ರಾಂತಿಕಾರಿ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗೌರವಾಧ್ಯಕ್ಷ ರವಿಕೃಷ್ಣಾರೆಡ್ಡಿ ಹೇಳಿದರು.
ತಾಲೂಕು ಕಚೇರಿ ಮುಂದೆ ಸೋಮವಾರ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಜನ್ಮದಿನಾಚರಣೆಯಲ್ಲಿ ಮಾತನಾಡಿದ ಅವರು, ಜಲಿಯನ್ ವಾಲಾಬಾಗ್ ಹತ್ಯಾಕಾಂಡದಂತಹ ಬ್ರಿಟಿಷರ ದೌರ್ಜನ್ಯಗಳು ಅವರ ಮೇಲೆ ಬೀರಿದ ಪರಿಣಾಮ, ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಅವರು ವಹಿಸಿದ ಪಾತ್ರ ಅತ್ಯಂತ ಮುಖ್ಯ. ದೇಶಕ್ಕಾಗಿ ಪ್ರಾಣತ್ಯಾಗ ಮಾಡುವ ಸಂದರ್ಭದಲ್ಲಿಯೂ ಯಾವುದೇ ರೀತಿಯ ಹಿಂಜರಿಕೆ ತೋರದೆ, ಆದರ್ಶ ಮತ್ತು ನಂಬಿಕೆಗಳಿಗಾಗಿ ಧೈರ್ಯದಿಂದ ಮರಣ ಎದುರಿಸಿದ ಭಗತ್ಸಿಂಗ್ ಬದುಕು ಯುವಜನರಿಗೆ ಪ್ರೇರಣೆ ಎಂದರು.
ಇಂದಿನ ಯುವಜನರು ಭಗತ್ಸಿಂಗ್ ಅವರ ದೇಶಪ್ರೇಮ, ಧೈರ್ಯ ಮತ್ತು ಸಾಮಾಜಿಕ ಬದ್ಧತೆಯನ್ನು ಸ್ಫೂರ್ತಿಯಾಗಿಸಿಕೊಂಡು ವ್ಯವಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮ, ಅನ್ಯಾಯ ಮತ್ತು ಭ್ರಷ್ಟಾಚಾರದ ವಿರುದ್ಧ ಪ್ರಜಾಸತ್ತಾತ್ಮಕ ರೀತಿಯಲ್ಲಿ ಧ್ವನಿ ಎತ್ತಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಭಗತ್ ಸಿಂಗ್ ಅಭಿಮಾನಿಗಳಿಂದ ಅನ್ನಸಂತರ್ಪಣೆ ಹಾಗೂ ಕಬ್ಬಿನ ಹಾಲು ವಿತರಿಸಲಾಯಿತು. ಕಾರ್ಯಕ್ರಮದಲ್ಲಿವೆಂಕಟೇಶ್, ಜೈರಾಮಗೌಡ, ಗಣೇಶ್, ಲಕ್ಷಿ$್ಮನಾರಾಯಣ ಹಾಗೂ ಭಗತ್ ಸಿಂಗ್ ಅಭಿಮಾನಿಗಳು ಇದ್ದರು.
ಕಾರ್ಯಕ್ರಮದಲ್ಲಿ ಕೆಆರ್ಎಸ್ ಪಕ್ಷದ ರಾಜ್ಯ ಯುವ ಘಟಕದ ಕಾರ್ಯದರ್ಶಿ ವೆಂಕಟೇಶ್, ಎಸ್ಸಿ, ಎಸ್ಟಿ ಘಟಕದ ಕಾರ್ಯದರ್ಶಿ ಹನುಸ್ವಾಮಿ, ರೈತ ಘಟಕದ ಕಾರ್ಯದರ್ಶಿ ವಿಶ್ವನಾಥ್, ಬೆಂ. ಗ್ರಾಮಾಂತರ ಜಿಲ್ಲಾಧ್ಯಕ್ಷ ಶಶಿಕುಮಾರ್, ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.