bharath jodo 
ಬೆಂಗಳೂರು ಗ್ರಾಮಾಂತರ

ಭಾರತ್ ಜೋಡೋ ನೋಂದಣಿಗೆ ಡಿಸಿ ಕರೆ

ಶಿವರಾಜ.ಎಂ

ಬೆಂಗಳೂರು ಗ್ರಾಮಾಂತರ: ರಾಜ್ಯ ಸರ್ಕಾರ ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮುದಾಯಿಕ ಮತ್ತು ಸಾಮಾಜಿಕ ಸಾಮರಸ್ಯ ಉತ್ತೇಜಿಸುವ ಸದುದ್ದೇಶದಿಂದ ಭಾರತ್ ಜೋಡೋ ಯುವ ಸಂಘ ರಚಿಸಲು ಉದ್ದೇಶಿಸಲಾಗಿದ್ದು ಜಿಲ್ಲೆಯ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧಾ ಕರೆ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 107 ಗ್ರಾಮ ಪಂಚಾಯತಿಗಳಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ 63 ರಂತೆ 170 ಭಾರತ್ ಜೋಡೋ ಯುವಜನರ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದರಂತೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸಂಘಗಳನ್ನು ಸ್ಥಾಪಿಸಲು ಅವಕಾಶವಿದೆ. 16 ರಿಂದ 35 ವರ್ಷದೊಳಗಿನ ಯುವಜನರು ಭಾರತ್ ಜೋಡೋ ಯುವ ಸಂಘದ ಪೋರ್ಟಲ್ ಮೂಲಕ ಆಧಾತ್ ಆಧಾರಿತವಾಗಿ ನೋಂದಾಯಿಸಿಕೊಳ್ಳಬಹುದು. ನೋಂದಣಿಗೆ 10 ರೂ.ಶುಲ್ಕ ನಿಗದಿಪಡಿಸಲಾಗಿದ್ದು, ಒಬ್ಬರು ಒಂದು ಸಂಘಕ್ಕೆ ಮಾತ್ರ ಸೇರಲು ಅವಕಾಶವಿದೆ. ಪ್ರತಿ ಸಂಘದ ರಚನೆಗೆ ಕನಿಷ್ಠ 100 ಯುವ ಸಮೂಹ ಸದಸ್ಯತ್ವ ಕಡ್ಡಾಯವಾಗಿದೆ ಎಂದು ತಿಳಿಸಿದರು.
ಯುವ ಸಮೂಹ ಸಂಘಗಳ ಸದಸ್ಯತ್ವಕ್ಕೆ ವೆಬ್‌ಸೈಟ್ ಮೂಲಕ ಆನ್‌ಲೈನ್ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಸಂಪರ್ಕಿಸಬಹುದು ಎಂದು ಡಿಸಿ ತಿಳಿಸಿದ್ದಾರೆ.