Constitution Day Celebration 
ಬೆಂಗಳೂರು ಗ್ರಾಮಾಂತರ

ಇದೊಂದು ಐತಿಹಾಸಿಕ ದಿನ

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಇದೊಂದು ಐತಿಹಾಸಿಕ ದಿನ 1949ರ . 26ರಂದು ಭಾರತದ ಸಂವಿಧಾನವನ್ನು ಸಂವಿಧಾನ ರಚನಾ ಸಭೆ ಅಂಗೀಕರಿಸಿತು ಆದ್ದರಿಂದ ಈ ದಿನವನ್ನು ಸಂವಿಧಾನ ದಿನ ಎಂದು ಕರೆಯುತ್ತಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಮುನಿಗಂಗಯ್ಯ ತಿಳಿಸಿದರು.
ಹೋಬಳಿಯ ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಬುಧವಾರ ಭಾರತದ ಸಂವಿಧಾನ ದಿನದ ಪ್ರಯುಕ್ತ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು,
ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಸಂವಿಧಾನದ ಮೂಲಭೂತ ರಾಜ್ಯ ನಿದೇರ್ಶನ ತತ್ವಗಳು ಪಂಚಾಯತ್ ರಾಜ್ ವ್ಯವಸ್ಥೆಗಳು, ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗದ ಕುರಿತು ವಿವರಿಸಲು ಹಾಗೂ ಪ್ರಜಾಪ್ರಭುತ್ವದ ಮಾಹಿತಿ ಒದಗಿಸಲು ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆಗಳನ್ನು ಗೌರವಿಸಲು ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತದೆ ಎಂದರು.