ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಟಿತ 2026-27 ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ದೊಡ್ಡಬೆಳವಂಗಲ ಠಾಣೆಯ ಇನ್‌ಸ್ೆಕ್ಟರ್ ಕಲ್ಲಪ್ಪ ಎಸ್ ಖರತ್ ಭಾಜನರಾಗಿದ್ದಾರೆ.
ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿ ೋಷಿಸಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ. ಈ ಸಾಲಿನಲ್ಲಿ ಕಲ್ಲಪ್ಪ ಆಯ್ಕೆಯಾಗಿದ್ದಾರೆ. ಇವರು ತಮ್ಮ ಸೇವಾ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅಪರಾಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಹಾಗೂ ಸಾರ್ವಜನಿಕರೊಂದಿಗೆ ಜನಸ್ನೇಹಿ ಪೊಲೀಸಿಂಗ್ ಕಾರ್ಯಕ್ಷಮತೆಯನ್ನು ಪರಿಗಣಿಸಲಾಗಿದ್ದು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಮ್ಮೆ ಎನಿಸಿದೆ. ಜಿಲ್ಲೆಯ ಪೊಲೀಸ್ ಸಿಬ್ಬಂದಿ ಕಲ್ಲಪ್ಪ ಅವರಿಗೆ ಶುಭಕೋರಿದ್ದಾರೆ.
ಡಿಜಿ-ಐಜಿಪಿ ಪದಕಕ್ಕೆ ಭಾಜನವಾಗಿರುವುದು ಬಹಳ ಸಂತಸದ ತಂದಿದೆ ಇದರಿಂದ ನನ್ನಲ್ಲಿ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಿದೆ. ಸಮಾಜದಲ್ಲಿ ಕಾನೂನು ರಕ್ಷಣೆ ವಿಷಯದಲ್ಲಿ ಮತ್ತಷ್ಟು ದಕ್ಷತೆಯಿಂದ ಕಾರ್ಯನಿರ್ವಹಿಸುವ ವಿಶ್ವಾಸವಿದೆ ಎಂದು ಕಲ್ಲಪ್ಪ ಅನಿಸಿಕೆ ಹಂಚಿಕೊಂಡಿದ್ದಾರೆ.