election 
ಬೆಂಗಳೂರು ಗ್ರಾಮಾಂತರ

ಬಾಶೆಟ್ಟಿಹಳ್ಳಿ ಪಪಂ, ದೊಡ್ಡಬಳ್ಳಾಪುರ ನಗರಸಭೆಗೆ ಚುನಾವಣೆ

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ರಾಜ್ಯ ಚುನಾವಣಾ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರಸಭೆಗೆ ಉಪ ಚುನಾವಣೆ ನಡೆಸಲು ಚುನಾವಣೆ ವೇಳಾಪಟ್ಟಿ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
ಹೊಸದಾಗಿ ರಚನೆಯಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪೈಕಿ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು 19 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ವಿವಿಧ ಕಾರಣಗಳಿಂದ ತೆರವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಉಪ ಚುನಾವಣೆ ಪೈಕಿ ದೊಡ್ಡಬಳ್ಳಾಪುರ ನಗರಸಭೆಗೆ ಉಪ ಚುನಾವಣೆ ಘೋಷಿಸಿದ್ದು 21 ವಾರ್ಡ್‌ಗಳಿಗೆ ಉಪ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಚುನಾವಣೆ ವೇಳಾಪಟ್ಟಿ:
ಜಿಲ್ಲಾಧಿಕಾರಿಗಳಿಂದ 2025 ಡಿ.2 ರ ಮಂಗಳವಾರ ಅಧಿಸೂಚನೆ ಹೊರಡಿಸಲಾಗುವುದು. ಡಿ.9 ಮಂಗಳವಾರ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ಬುಧವಾರ ನಾಮಪತ್ರಗಳ ಪರಿಶೀಲನೆ, 12 ಶುಕ್ರವಾರ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ.21 ಭಾನುವಾರ (ಬೆಳಗ್ಗೆ 7 ಗಂಟೆಯಿಂದ ಸಂಜೆ 5ಗಂಟೆಯವರೆಗೆ) ಮತದಾನ ನಡೆಯಲಿದೆ. ಮರು ಮತದಾನ ಇದ್ದಲ್ಲಿ ಡಿ.23 ಮಂಗಳವಾರ (ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ) ಮರು ಮತದಾನ ನಡೆಯಲಿದೆ. ಡಿ.24 ಬುಧವಾರ ಅಯಾ ತಾಲೂಕು ಕೇಂದ್ರ ಸ್ಥಳಗಳಲ್ಲಿ (ಬೆಳಗ್ಗೆ 8 ಗಂಟೆಯಿಂದ) ಮತ ಎಣಿಕೆ ನಡೆಯಲಿದ್ದು. ಚುನಾವಣೆ ಮುಕ್ತಾಯಗೊಳ್ಳಲಿದೆ.
ನೀತಿ ಸಂಹಿತೆ:
ಚುನಾವಣಾ ಸಂಹಿತೆಯು 2025 ರ ಡಿ.2 ರಿಂದ ಡಿ.24 ರವರೆಗೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ಗಳ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದ್ದಾರೆ.
--
ಪೊಟೋ ಬಸವರಾಜು ಎಂದು ಸೇವ್ ಆಗಿದೆ()))))))))