Election schedule announced 
ಬೆಂಗಳೂರು ಗ್ರಾಮಾಂತರ

ಚುನಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಯನ್ನು ರಚಿಸುವ ಸಲುವಾಗಿ ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಯೋಜನಾ ಸಮಿತಿ ಚುನಾವಣೆ-2026 ರ ಚುನಾವಣಾಧಿಕಾರಿ ಹಾಗೂ ಜಿಪಂ ಸಿಇಒ ಡಾ.ಕೆ.ಎನ್ ಅನುರಾಧಾ ಚುನಾವಣೆ ಅಧಿಸೂಚನೆ ಹೊರಡಿಸಿದ್ದಾರೆ.
ಅಧಿಸೂಚನೆಯಂತೆ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ನಿಯಮಗಳು, 1996 ರ ನಿಯಮ 8 ರ ಪ್ರಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ದೊಡ್ಡಬಳ್ಳಾಪುರ ನಗರಸಭೆ, ನೆಲಮಂಗಲ ನರಸಭೆ, ವಿಜಯಪುರ ಪುರಸಭೆ ಮತ್ತು ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿಯಿಂದ ಖಾಲಿ ಇರುವ 10 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಸಲಾಗುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಸದಸ್ಯರು ೆ.17 ರವರೆಗಿನ ಯಾವುದೇ ದಿನದಂದು (ಸಾರ್ವತ್ರಿಕ ರಜಾ ದಿನವನ್ನು ಹೊರತುಪಡಿಸಿ) ಕಚೆೇರಿ ಸಮಯದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರವರೆಗೆ ಚುನಾವಣೆಯ ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಪಡೆಯಬಹುದು.
ೆ.17ಕ್ಕೆ ಸಲ್ಲಿಕೆ:
ನಾಮಪತ್ರಗಳನ್ನು ಅಭ್ಯರ್ಥಿ ಅಥವಾ ಅವರ ಸೂಚಕರು ೆ.17 ರಂದು ಮೀರದಂತೆ ಯಾವುದೇ ದಿನಾಂಕದಂದು (ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ) ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ನಾಮಪತ್ರಗಳನ್ನು ಸಂಬಂಧಪಟ್ಟ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ೆ.18ರಂದು ಪರಿಶೀಲನೆ ಮಾಡುವುದು. ಅಭ್ಯರ್ಥಿ ಅಥವಾ ಅವರ ಸೂಚಕರ ಮೂಲಕ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ನೋಟೀಸನ್ನು ೆ.19 ರಿಂದ ೆ.21 ರಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ರೊಳಗೆ ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಬಹುದು. ಚುನಾವಣೆಗೆ ಸ್ಪರ್ಧೆ ಇರುವ ಸಂದರ್ಭದಲ್ಲಿ ಮತದಾನವನ್ನು ೆ.27 ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಸಲಾಗುವುದು. 27 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು, 28ಕ್ಕೆ ಚುನಾವಣೆ ಪ್ರಕ್ರಿಯೆ ಮುಗಿಯಲಿದೆ