fid 
ಬೆಂಗಳೂರು ಗ್ರಾಮಾಂತರ

ರಸಗೊಬ್ಬರ ಖರೀದಿಗೆ ಎ್ಐಡಿ ಕಡ್ಡಾಯ

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ತಿಳಿಸಿದರು.
ದೇವನಹಳ್ಳಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಸಗೊಬ್ಬರ ತಯಾರಕರು, ಸರಬರಾಜುದಾರರು ಮತ್ತು ಮಾರಾಟಗಾರರ ಸಭೆಯಲ್ಲಿ ಮಾತನಾಡಿದರು. 2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು. ಕೆ-ಕಿಸಾನ್ ತಂತ್ರಾಂಶದ ಬಳಕೆ ಅಗತ್ಯವಾಗಿದೆ. ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೆ ಕಿಸಾನ್ ತಂತ್ರಾಂಶದ ಮೂಲಕ ವಿತರಿಸಲಾಗುವುದು ಎಂದರು.
ಹೊಸ ಎ್ಐಡಿ ನೋಂದಣಿ:
ಈವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ಕೂಡಲೇ ತಮ್ಮ ಪಹಣಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಆಧಾರ್‌ಕಾರ್ಡ್ ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕಾ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಬೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೆ ಎ್ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆನಂಬರ್‌ಗಳನ್ನು ಅದಕ್ಕೆ ಅಪ್‌ಡೇಡ್ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ ಎಂದು ಕಲಾವತಿ ತಿಳಿಸಿದರು.
ಮಾರಾಟಗಾರರಿಗೆ ಎಚ್ಚರಿಕೆ:
ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎ್ಐಡಿ ನಮೂದಿಸಿ ಗೊಬ್ಬರ ಮಾರಾಟಮಾಡಬೇಕು ಇದಕ್ಕೆ ಸಂಬಂಧಿಸಿದಂತೆ ಇಲಾಖೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ. ಚಿಲ್ಲರೆ ರಸಗೊಬ್ಬರ ಮಾರಾಟ ಗಾರರು ತಮ್ಮ ಎಲ್ಲ ಒ ಫಾರಂಗಳನ್ನು ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ’ಓ’ ಫಾರಂಗಳ ನೋಂದಣಿ ಇಲ್ಲದೆ ಮಾರಾಟ ಮಾಡಿದರೆ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ರಸಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಾಗಿಯನ್ನು ರದ್ದುಗೊಳಿಸಲಾಗುವುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಚ್ಚರಿಕೆ ನೀಡಿದರು.