building ingration 
ಬೆಂಗಳೂರು ಗ್ರಾಮಾಂತರ

ಪಂಚಾಯಿತಿಗಳ ಅಭಿವೃದ್ಧಿಗೆ ನೆರವು

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯಲ್ಲಿನ ಎಲ್ಲ ಪಂಚಾಯಿತಿಗಳ ಅಭಿವೃದ್ಧಿಗೆ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದೇವನಹಳ್ಳಿ ತಾಲೂಕು ಪಂಚಾಯಿತಿ, ಕುಂದಾಣ ಗ್ರಾಮ ಪಂಚಾಯಿತಿ ಕಾರ್ಯಾಲಯ ವತಿಯಿಂದ 1.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕುಂದಾಣ ಗ್ರಾಮ ಪಂಚಾಯಿತಿ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಪಂಚಾಯಿತಿ ಅಭಿವೃದ್ಧಿಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಶ್ರಮಿಸಬೇಕು. ತೆರಿಗೆ ಸಂಗ್ರಹ, ಆದಾಯದಲ್ಲಿ ಕುಂದಾಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಆಗಲಿ ಎಂದು ಆಶಿಸಿದರು.
ಶಾಲಾ ಕೊಠಡಿ ಉದ್ಘಾಟನೆ:
ಕುಂದಾಣ ಹಾಗೂ ವೆಂಕಟಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ದೇವಗಾನಹಳ್ಳಿ ಗ್ರಾಮದಲ್ಲಿ 35 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಲಾಯಿತು.