polio meeting 
ಬೆಂಗಳೂರು ಗ್ರಾಮಾಂತರ

ಅಂಗವಿಕಲತೆ ತಡೆಯಲು ಲಸಿಕೆ ರಾಮಬಾಣ

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಮಕ್ಕಳ ಮುಂದಿನ ಆರೋಗ್ಯ ಭವಿಷ್ಯಕ್ಕೆ ಪಾಲಕರು ತಪ್ಪದೆ ಪಲ್ಸ್ ಪೊಲಿಯೋ ಲಸಿಕೆ ಹಾಕಿಸಬೇಕು. ಇದರಿಂದ ಭವಿಷ್ಯದಲ್ಲಿ ಅಂಗವಿಕಲತೆಯನ್ನು ತಡೆಯಬಹುದಾಗಿದೆ ಇದು ಅಂಗವಿಕಲತೆ ತಡೆಯಲು ರಾಮಬಾಣವಿದ್ದಂತೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಸಲಹೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅನುಷ್ಠಾನದ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಡಿ.21 ರಿಂದ 24 ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು ಎಲ್ಲ ಪಾಲಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು. ಆರೋಗ್ಯಕ್ಕಿಂತ ಭಾಗ್ಯ ಮತ್ತೊಂದಿಲ್ಲ, ಮಕ್ಕಳ ಆರೋಗ್ಯ ದೃಷ್ಟಿಯಿಂದ ಮುಖ್ಯವಾಗಿ ಭವಿಷ್ಯದಲ್ಲಿ ಕಾಡಬಹುದಾದ ಅಂಗವೈಕಲ್ಯದಿಂದ ಮಕ್ಕಳನ್ನು ರಕ್ಷಣೆ ಮಾಡಲು ಪಲ್ಸ್ ಪೊಲೀಯೋ ಲಸಿಕೆಯನ್ನು ಹಾಕಿಸಬೇಕು ಎಂದು ಹೇಳಿದರು.
ಮನೆಮನೆಗೆ ಭೇಟಿ ನೀಡಿ ಲಸಿಕೆ:
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸರ್ವೆಯ ಅಂಕಿಅಂಶದಂತೆ ಐದು ವರ್ಷದೊಳಗಿನ 96,727 ಮಕ್ಕಳು ಇದ್ದಾರೆ ಎಂಬ ವರದಿ ಇದೆ. ಅದರನ್ವಯ ಡಿ.21 ಭಾನುವಾರದಿಂದ ಲಸಿಕಾ ಅಭಿಯಾನ ಪ್ರಾರಂಭವಾಗಲಿದೆ. ಡಿ.22 ರಿಂದ 24ರವರೆಗೆ ಆರೋಗ್ಯ ಸಿಬ್ಬಂದಿ ಎಲ್ಲ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಪಡೆದಿಲ್ಲದ ಮಕ್ಕಳಿಗೆ ಲಸಿಕೆ ಹಾಕುತ್ತಾರೆ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸುವ ಮೂಲಕ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಎಲ್ಲ ಕಡೆ ಲಸಿಕಾ ಕೇಂದ್ರ:
ಜಿಲ್ಲೆಯ ಎಲ್ಲ ಪಂಚಾಯಿತಿ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳು ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತದೆ. ಮಕ್ಕಳ ಅಂಗವೈಕಲ್ಯ ತಡೆಯುವ ನಿಟ್ಟಿನಲ್ಲಿ ಪಾಲಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಿಸಬೇಕು. ಲಸಿಕೆ ಬಗ್ಗೆ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಜಿಲ್ಲಾಧಿಕಾರಿ ಲಸಿಕೆಯನ್ನು ಪಡೆಯದ ಮಕ್ಕಳಿಗೆ ಮನೆಮನೆಗೆ ತೆರಳಿ ಲಸಿಕೆ ನೀಡುವಂತೆ, ವಲಸೆ ಕಾರ್ಮಿಕರ ಮಕ್ಕಳನ್ನು ಗುರುತಿಸಿ ಅವರಿಗೆ ಕೂಡ ಲಸಿಕೆ ಹಾಕಿಸಬೇಕು. ಜಿಲ್ಲೆಯಲ್ಲಿ ಶೇ.10 ಪ್ರಗತಿ ಸಾಧಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚು ಪ್ರಚಾರ ಮಾಡಬೇಕು:
ಮುಂಚಿತವಾಗಿ ಬೂತ್‌ಗಳ ನಿಯೋಜನೆ, ಸಿಬ್ಬಂದಿ ನಿಯೋಜನೆ ಸೇರಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ಪೋಲಿಯೋ ಲಸಿಕೆ ಹಾಕಿಸುವಂತೆ ವ್ಯಾಪಕ ಪ್ರಚಾರ ಮಾಡಿ ಎಲ್ಲ ಗ್ರಾಮಗಳಿಗೂ ತಲುಪುವಂತೆ ಸ್ವಚ್ಚತಾ ವಾಹಿನಿ ಮತ್ತು ಆಟೋಗಳ ಮೂಲಕ ಪ್ರಚಾರ ಮಾಡಬೇಕು ಲಸಿಕೆ ಅಭಿಯಾದ ಕುರಿತು ಮಾಹಿತಿ ನೀಡಿ ಜಿಲ್ಲೆಯ ಯಾವೊಂದು ಮಗುವೂ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿ ತಿಳಿಸಿದರು.
ಹೆದ್ದಾರಿ, ಟೋಲ್‌ಗಳಲ್ಲೂ ಕೇಂದ್ರ:
ಸಾರ್ವಜನಿಕರು ಹೆಚ್ಚು ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಹಾಗೂ ಟೋಲ್‌ಗೇಟ್‌ಗಳಲ್ಲಿ ಮತ್ತು ರಾಷ್ಟೀಯ ಹೆದ್ದಾರಿಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಡಾ.ಲಕ್ಕಕೃಷ್ಣಾರೆಡ್ಡಿ ಮಾಹಿತಿ ನೀಡಿದರು.