ಪ್ರಧಾನಮಂತ್ರಿ ಪಿಂಚಣಿ ಯೋಜನೆ ನೋಂದಣಿ ಅಭಿಯಾನ
ಶಿವರಾಜ ಎಂ. ಬೆಂಗಳೂರು ಗ್ರಾಮಾಂತರ
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರೂಪಿಸಿರುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿಎಂ-ಎಸ್‌ವೈಎಂ) ಪಿಂಚಣಿ ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ದೊರೆತಿದ್ದು ಪಿಂಚಣಿ ಯೋಜನೆಯಡಿ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ನೋಂದಣಿ ಅಭಿಯಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ ಜಾರಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಜ.15ರಿಂದ ಅಭಿಯಾನ ಆರಂಭಿಸಿದ್ದು ೆ.15ರವರೆಗೆ ನಗರ ಪ್ರದೇಶಗಳಲ್ಲಿ ಹಾಗೂ 16 ನೇ ಫೆಬ್ರವರಿಯಿಂದ 15 ನೇ ಮಾರ್ಚ್ ವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರ ಚಂದದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ರೂಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ ಚಂದದಾರರು 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ.
ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, 18 ರಿಂದ 40 ವರ್ಷಗಳ ವಯೋಮಿತಿ ಒಳಗಿರಬೇಕು. ಅವರ ಮಾಸಿಕ ಆದಾಯವು 15 ಸಾವಿರ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ, ಇಸ್‌ಐ, ಪಿಎ್, ಎನ್‌ಫಿಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್‌ಸಂಖ್ಯೆ ಹೊಂದಿರಬೇಕು. ಯಾವುದು ಹೆಚ್ಚು ಅದನ್ನು ಪಾವತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಂದಾದಾರರು ಮೃತಪಟ್ಟಲ್ಲಿ ಅವರ ಪತ್ನಿ ಅಥವಾ ಪತಿ ಮಾತ್ರ ಪಿಂಚಣಿಯ ಶೇ. 50 ಪಿಂಚಣಿಯನ್ನು ಪಡೆಯಲು ಅರ್ಹರು. ಯೋಜನೆಯ ವಿದ್ಯುನ್ಮಾನ ಆಧಾರಿತವಾಗಿದ್ದು ಎಂಎಸ್‌ಎಂಎಸ್ ಮೂಲಕ ಎಲ್ಲ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆ ಕಾಲಕಾಲಕ್ಕೆ ತಿಳಿಸಲಾಗುವುದು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಚೇರಿಗಳು, ಎಲ್ಐ.ಸಿಯ ಶಾಖಾ ಕಚೇರಿಗಳು, ಇಪಿಎ್ ಮತ್ತು ಇಎಸ್‌ಐಸಿ ಕಚೇರಿಗಳು, ಅಥವಾ ಟೋಲ್ ಫ್ರೀ ಕಾಲ್ ಸೆಂಟರ್ ಸಂಖ್ಯೆ 18002676888, ಎಲ್ಐಸಿ ವೆಬ್‌ಸೈಟ್ ಅಥವಾ ಸಮೀಪದ ಸಿಎಸ್ಸಿ ಸೆಂಟರ್‌ಗಳಲ್ಲಿ ನೋಂದಾಯಿಸಿಕೊಳ್ಳಬಹುದು.
ಕೇಂದ್ರ ಸರ್ಕಾರ ಚಂದದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ ಫಲಾನುಭವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3 ಸಾವಿರ ರೂಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗುತ್ತಾರೆ ಚಂದದಾರರು 10 ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿದ ವಂತಿಕೆಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚು ಅದನ್ನು ಪಾವತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಸಂಘಟಿತ ಕಾರ್ಮಿಕರ ಭವಿಷ್ಯದ ದೃಷ್ಟಿಯಿಂದ ಈ ಯೋಜನೆ ರೂಪಿಸಲಾಗಿದ್ದು, ಜಿಲ್ಲೆಯಲ್ಲಿ ಎಲ್ಲ ಅಸಂಘಟಿತ ಕಾರ್ಮಿಕರ ನೋಂದಣಿಗೆ ವಿಶೇಷ ಅಭಿಯಾನ ಆರಂಭಿಸಲಾಗಿದೆ. ಎರಡು ಹಂತಗಳಲ್ಲಿ ತಲಾ ಒಂದೊಂದು ತಿಂಗಳು ನೋಂದಣಿ ಅಭಿಯಾನ ನಡೆಯಲಿದ್ದು ಕಾರ್ಮಿಕರು ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕು
ಹರ್ಷವರ್ಧನ್, ಕಾರ್ಮಿಕರ ಅಧಿಕಾರಿ, ಬೆಂ.ಗ್ರಾ.ಜಿಲ್ಲೆ