vist 
ಬೆಂಗಳೂರು ಗ್ರಾಮಾಂತರ

ಮಾನವ ಹಕ್ಕುಗಳ ಆಯೋಗದ ತಂಡ ಭೇಟಿ

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕು ಕನ್ನಮಂಗಲ ಗ್ರಾಮ ಪಂಚಾಯಿತಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಪಂಚಾಯತ್ ರಾಜ್ ಹಾಗೂ ಸ್ಥಳೀಯ ಸರ್ಕಾರದ ವಿಶೇಷ ಮಾನಿಟರ್ ಆಗಿರುವ ಉಮಾಕಾಂತ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಶಿವಕುಮಾರ್ ಹಾಗೂ ದೇವನಹಳ್ಳಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಗಳ ಆಡಳಿತ ವೈಖರಿ, ಯೋಜನೆಗಳ ಅನುಷ್ಠಾನ, ಸ್ಥಳೀಯ ಸರ್ಕಾರದ ಮುಖೇನ ಸಂವಿಧಾನದ ಧೇಯೋದ್ದೇಶಗಳನ್ನು ಸಾಕಾರಗೊಳಿಸುವಲ್ಲಿ ಎದುರಾಗುತ್ತಿರುವ ಸವಾಲುಗಳು ುರಿತು ಅಧ್ಯಯ ನಡೆಯಿತು.