Youth Movement 
ಬೆಂಗಳೂರು ಗ್ರಾಮಾಂತರ

ತಂಬಾಕು ಬಳಕೆಯಿಂದ ಅನಾರೋಗ್ಯ

ಶಿವರಾಜ.ಎಂ
ವಿಜಯವಾಣಿ ಸುದ್ದಿಜಾಲ ಮಧುರೆ
ಶೈಕ್ಷಣಿಕ ಸಂಸ್ಥೆಗಳ ಹತ್ತಿರ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಅಥವಾ ತಂಬಾಕು ನಿಯಮಗಳನ್ನು ಉಲ್ಲಂಸುವುದು ಕಂಡುಬಂದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಹಾದ್ರೀಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂದಿನಿ ಎಚ್ಚರಿಕೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ಹಾದ್ರೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಧುರನಹೊಸಹಳ್ಳಿ ಗ್ರಾಮದಲ್ಲಿ ಗುರುವಾರ ತಂಬಾಕು ಮುಕ್ತ ಯುವ ಅಂದೋನಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲ ಶಾಲಾ, ಕಾಲೇಜು, ವಿಶ್ವವಿದ್ಯಾಲಯಗಳನ್ನು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಗಳೆಂದು ಘೋಷಿಸಲು ಹಾಗೂ ಹಾಗೂ ತಂಬಾಕು ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ ಎಂದು ತಿಳಿಸಿದರು. ಶೈಕ್ಷಣಿಕ ಸಂಸ್ಥೆಗಳ ಸುತ್ತಲೂ ಯಾರಾದರೂ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಸಾರ್ವಜನಿಕರು ನಮಗೆ ದೂರು ನೀಡಬಹುದು ಎಂದು ಮನವಿ ಮಾಡಿದರು.
ನಿಯಮ ಮೀರಿದರೆ ಕಾನೂನು ಕ್ರಮ:
18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮಾರಾಟ ಮಾಡುವಂತಿಲ್ಲ. ಬೀಡಿ, ಸಿಗರೇಟು ಗುಟ್ಕಾವನ್ನು ಮಕ್ಕಳಿಗೆ ಮಾರಾಟ ಮಾಡಬಾರದೆಂಬ ನಿಯಮಗಳಿವೆ ಈ ನಿಯಮಗಳನ್ನು ಮೀರಿ ವ್ಯಾಪಾರಿಗಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದರೆ ಕಾನೂನು ಕ್ರಮ ಎದುರಿಬೇಕಾಗುತ್ತದೆ ಎಂದು ನಂದಿನಿ ತಿಳಿಸಿದರು. ನಿಷೇಧಿತ ಸ್ಥಳಗಳಲ್ಲಿ ತಂಬಾಕು ಮಾರಾಟ ಮತ್ತು ಸೇವನೆ ಹಾಗೂ ತಂಬಾಕು ಮಾರಾಟ ಪರವಾನಗಿ ಇಲ್ಲದೇ ಮಾರಾಟ ಮಾಡಿದವರಿಗೆ ದಂಡ ವಿಧಿಸಲಾಗಿತ್ತದೆ, ಜತೆಗೆ ಶಿಕ್ಷೆಗೆ ಗುರಿಯಾಗಬಹುದು. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸುವ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕ್ಯಾನ್ಸರ್‌ನಂಥ ಕಾಯಿಲೆ ಬರಲಿದೆ:
ತಂಬಾಕು ಸೇವನೆಯೂ ಅಪಾಯಕಾರಿಯಾಗಿದ್ದು ಕ್ಯಾನ್ಸರ್‌ನಂಥ ಮಾರಣಾಂತಿಕ ಕಾಯಿಲೆಗೆ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ ಈ ಹಿನ್ನೆಲೆಯಲ್ಲಿ ಯುವಜನತೆಯಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪಿಡಿಒ ತಿಳಿಸಿದರು.
ಪ್ರಮುಖ ಬೀದಿಗಳಲ್ಲಿ ಜಾಥಾ:
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿಯುವಜನರನ್ನು ತಂಬಾಕು ಮುಕ್ತ ಜೀವನಶೈಲಿ ಅಳವಡಿಸಿಕೊಳ್ಳುವಂತೆ ಅರಿವು ಮೂಡಿಸಲಾಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಮನೆಮನೆ ಭೇಟಿ ನೀಡಿ ತಂಬಾಕಿನಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು, ಅಂಗಡಿ ಮಾಲೀಕರಿಗೆ ತಿಳಿವಳಿಕೆ ನೀಡಲಾಯಿತು. ಗ್ರಾಮದ ಯುವಕರು ತಂಬಾಕು ಸೇವನೆ ತ್ಯಜಿಸುವ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಶಾಲೆಗಳ ಸುತ್ತಮುತ್ತ ಮಾರಾಟ ನಿಷೇಧ ಜಾಗೃತಿಗಾಗಿ ಗೋಡೆ ಬರಹಗಳನ್ನು ಬರೆಯಲಾಯಿತು, ಬ್ಯಾನರ್, ಪೋಸ್ಟರ್‌ಗಳ ಪ್ರದರ್ಶನದ ಮೂಲಕ ತಂಬಾಕು ಮುಕ್ತ ಹಳ್ಳಿ ಸಂದೇಶವನ್ನು ಸಾರಲಾಯಿತು.
---
ಪೊಟೋ ಹಾದ್ರಿಪುರ ಪೋಲ್ಡರ್‌ನಲ್ಲಿದೆ()
ದೊಡ್ಡಬಳ್ಳಾಪುರ ತಾಲೂಕು ಮಧುರೆ ಹೋಬಳಿಯ ಹಾದ್ರೀಪುರ ಪಂಚಾಯಿತಿ ಮಧುರನ ಹೊಸಹಳ್ಳಿಯಲ್ಲಿ ತಂಬಾಕು ಮುಕ್ತ ಯುವ ಅಂದೋನ ಜಾಗೃತಿ ಜಾಥಾ ನಡೆಯಿತು. ಹಾದ್ರೀಪುರ ಪಂಚಾಯಿತಿ ಪಿಡಿಒ ನಂದಿನಿ, ಸಿಬ್ಬಂದಿ ಸುರೇಶ್ ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.