ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಶಿಕ್ಷಣ ವಿಭಾಗ ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಎಂ.ಇಡಿ ಕೋರ್ಸ್‌ಗಳ ಪ್ರವೇಶಕ್ಕೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ.
ದಂಡ ಶುಲ್ಕವಿಲ್ಲದೆ ಅರ್ಜಿಗಳನ್ನು ಸಲ್ಲಿಸಲು ಡಿ.20 ಕೊನೆಯ ದಿನವಾಗಿದೆ. 200 ರೂ.ಗಳ ದಂಡ ಸಹಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಡಿ.22 ಕೊನೆಯ ದಿನವಾಗಿದೆ. ಅರ್ಜಿಗಳನ್ನು https://uucms.karnataka.gov.in/Login/Index
ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಬೆಂ.ವಿವಿ ಅಂತರ್ಜಾಲ https://bangaloreuniversity.karnataka.gov.in/
ಭೇಟಿ ನೀಡಬಹುದು ಎಂದು ವಿವಿ ಪ್ರಕಟಣೆ ತಿಳಿಸಿದೆ.