ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಲುಗೋಡು ಗ್ರಾಮದ ಬಳಿ ರಾಷ್ಟ್ರೀಯ ಮಾಧ್ಯಮ ಶಾಲೆ ಕೊಠಡಿಗಳ ನಿರ್ಮಾಣಕ್ಕೆ, ಶಾಸಕ ಕೆ.ನೇಮಿರಾಜ ನಾಯ್ಕ ಭೂಮಿ ಪೂಜೆ ಮಾಡಿದರು. ಜೆಡಿಎಸ್ ಪುರಸಭೆ ಸದಸ್ಯ ಜನ್ನುನಾಗರಾಜ, ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಮುಖಂಡರಾದ ಜಡಿಯನ್ನವರ ಭೀಮಪ್ಪ, ಕೋರಿ ಸಂಗಪ್ಪ, ಶರಣು, ಮಂಜುನಾಥ, ಎಂ.ವೀರಪ್ಪ ಇತರರಿದ್ದರು. 
ಜಿಲ್ಲೆ

ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ರುದ್ರಪ್ಪ ವಾಲಿ

ಹಗರಿಬೊಮ್ಮನಹಳ್ಳಿ: ತಾಲೂಕಿನ ಚಿಲುಗೋಡು ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಮಾಧ್ಯಮ ಶಾಲೆ ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಕೆ.ನೇಮಿರಾಜ ನಾಯ್ಕ ಗುರುವಾರ ಚಾಲನೆ ನೀಡಿದರು.
ನಂತರ ಮಾತನಾಡಿ, ಇಲ್ಲಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹಾಗೂ ಸರ್ಕಾರಿ ಪ್ರೌಢಶಾಲೆಯ ಉನ್ನತೀಕರಣದ ಹಿನ್ನೆಲೆಯಲ್ಲಿ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯಲ್ಲಿ 1.63 ಕೋಟಿ ರೂ.ಗಳ ವೆಚ್ಚದಲ್ಲಿ ಕೊಠಡಿಗಳು ನಿರ್ಮಾಣವಾಗಲಿವೆ. ಚಿಲುಗೋಡು ಗ್ರಾಮದ ಶಕ್ತಿ ದೇವತೆಯಾದ ಕರಿಯಮ್ಮ ದೇವಿಯ ದೇಗುಲಕ್ಕೆ ಸೇರಿದ ಭೂಮಿಯಲ್ಲಿ, 5ಎಕರೆ ಭೂಮಿಯನ್ನು ಶಾಲೆಗಾಗಿ ಬಳಕೆ ಮಾಡಿಕೊಳ್ಳಲಾಗುತ್ತೆ. ಕಾಮಗಾರಿ ಸಂಪೂರ್ಣ ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದ ಸಾಮಗ್ರಿಗಳ ಬಳಕೆಯಾಗಬೇಕು ಎಂದು ನಿರ್ವಹಣೆ ಹೊಣೆ ಹೊತ್ತಿರುವ ಉಮಾಪತಿಗೆ ತಿಳಿಸಿದರು.