ಜಿಲ್ಲೆ

ಉತ್ತಮ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಪ್ರಶಸ್ತಿ ಪ್ರದಾನ

ಸುನಿಲ್ ಪೊನ್ನೇಟಿ

ಮಡಿಕೇರಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ನಗರದಲ್ಲಿ ಬುಧವಾರನಡೆದ ಅಂಗನವಾಡಿ ದಿನಾಚರಣೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಉತ್ತಮ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಾಲಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭಾ ಪ್ರಶಸ್ತಿ ಪ್ರದಾನ ಮಾಡಿದರು. ಬಾಡಗ-1 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಬಿ.ಬಿ. ಜಯಂತಿ, ಕರಡ ಅಂಗನವಾಡಿ ಕಾರ್ಯಕರ್ತೆ ಈಶ್ವರಿ ಕೆ.ಪಿ., ತಾಲೂಕು ಮಟ್ಟದ ಉತ್ತಮ ಕಾರ್ಯಕರ್ತೆ ಪ್ರಶಸ್ತಿ ಹಾಗೂ ಕೆ.ಬಾಡಗ ಅಂಗನವಾಡಿ ಕೇಂದ್ರದ ಸಹಾಯಕಿ ಎನ್.ಜಿ. ಸಾವಿತ್ರಿ, ಹಳೇ ತಾಲೂಕು ಅಂಗನವಾಡಿಯ ಮಮತಾ ಸಿ.ಎಲ್. ಉತ್ತಮ ಸಹಾಯಕಿ ಪ್ರಶಸ್ತಿ ಪಡೆದರು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ಒದಗಿಸಲು ತೆಗೆದುಕೊಂಡಿರುವ ಕ್ರಮಗಳನ್ನು ಮತ್ತು ಯೋಜನೆಯ ಚಟುವಟಿಕೆಗಳಲ್ಲಿ ಉತ್ತಮ ಸೇವೆ ಸಲ್ಲಿಸಿರುವುದನ್ನು ಗುರುತಿಸಿ ಇವರುಗಳಿಗೆ ಪ್ರಶಸ್ತಿ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಟಿ.ಎಸ್. ಸೀತಾಲಕ್ಷಿö್ಮÃ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಮೇಪಾಡಂಡ ಸವಿತಾ ಕೀರ್ತನ್ ಹಾಗೂ ಶೀಲಾ ಇದ್ದರು.