ಚಳ್ಳಕೆರೆ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಬಿ.ಶಾಂತಕುಮಾರಿ 2021-22ನೇ ಸಾಲಿನ ಅತ್ಯುತ್ತಮ ಸೇವಾ ಘಟಕ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ರಾಷ್ಟ್ರೀಯ ಸೇವಾ ಯೋಜನಾಕೋಶ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರತಾಪ್ ಲಿಂಗಯ್ಯ ತಿಳಿಸಿದ್ದಾರೆ.
ಗಂಗಾವತಿಯಲ್ಲಿ 4 ವಿಶೇಷ ಶಿಬಿರಗಳ ನಿರ್ವಹಣೆ, ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ 2 ಸೇವಾ ಶಿಬಿರಗಳಲ್ಲಿ ಎನ್ನೆಸ್ಸೆಸ್ ಶಿಬಿರಾರ್ಥಿಗಳನ್ನು ಸಾಮಾಜಿಕ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತಿ ಮನೆ ಮನೆಗೆ ಭೇಟಿ ಮಾಡಿ, ಶೌಚಗೃಹ, ಪಡಿತರ ಚೀಟಿ, ಸಾಮಾಜಿಕ ಪಿಂಚಣಿ ಸೌಲಭ್ಯ ವಂಚಿತ ಫಲಾನುಭವಿಗಳ ಮಾಹಿತಿ ಸಂಗ್ರಹ ಮಾಡಿ 25 ಇಲಾಖೆಗಳಿಗೆ ಮಾಹಿತಿ ನೀಡಿದ್ದರು. ಇವರ ಈ ಸೇವಾ ಕಾರ್ಯಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.