ನರಗುಂದ ತಾಲೂಕಿನ ವಿವಿಧ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಗದಗನಲ್ಲಿ ಸೋಮವಾರ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸತ್ಕರಿಸಲಾಯಿತು. 
ಜಿಲ್ಲೆ

ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ರವಿ ಎಸ್. ಬಳೂಟಗಿ

ನರಗುಂದ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗದಗದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಶೈಕ್ಷಣಿಕ ಸಮ್ಮೇಳನದಲ್ಲಿ ತಾಲೂಕಿನ 10 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಯಿತು.

ಬೆನಕನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಾದ ದಯಾನಂದ ಟಿ.ಎನ್. ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ವಿ.ಎಸ್. ಚಿಕ್ಕಮಠ, ನರಗುಂದದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.3ರ ಸಹಶಿಕ್ಷಕ ಎಂ.ಬಿ. ಮಲ್ಲಾಪುರ, ಮೂಗನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಬಿ.ಎ. ಬೋಯಿಟೆ, ನರಗುಂದ ನೀರಾವರಿ ಕಾಲನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ರ ಶಾಲೆ ಸಹ ಶಿಕ್ಷಕ ಬಿ.ಆರ್. ರಾಯನಗೌಡ್ರ, ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ.1ರ ಶಾಲೆ ದೈಹಿಕ ಶಿಕ್ಷಣ ಶಿಕ್ಷಕ ವಿ.ವಿ. ಕರಿಗಾರ, ಸಿದ್ಧಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಎಂ.ಎಸ್. ಮುಲ್ಲಾ, ಅರಿಷಿಣಗೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಬಾಲು ಮಾದರ, ಕೊಣ್ಣೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿ ಗಿರಿಜಾದೇವಿ ಕೊರಡಕೇರಿ, ಕಪಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಕ್ಕಮಹಾದೇವಿ ಚಕ್ರಸಾಲಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.