ಜಿಲ್ಲೆ

ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಮಂಜುನಾಥ ಅಂಗಡಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ. 6ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡುವರು. ಮುರುಘಾಮಠದ ಡಾ. ಮಲ್ಲಿಕಾರ್ಜುನ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.