ಮೈಸೂರು: ಕನ್ನಡರಿಗರು ಸಹಾನೂಭೂತಿಯಿಂದ ಇದ್ದರೂ ಕೇಂದ್ರ ಸರ್ಕಾರ ಎಲ್ಲ ವಿಷಯದಲ್ಲೂ ಕನ್ನಡಿಗರಿಗೆ ದ್ರೋಹವೆಸಗುತ್ತಿದ್ದು ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಟೀಕಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಮೈಸೂರು ಕುವೆಂಪುನಗರ ಘಟಕದಿಂದ ಕುವೆಂಪುನಗರದ ಕೆಎಸ್‌ಆರ್‌ಟಿಸಿ ಡಿಪೋ ಆವರಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾಭಿಮಾನಿಗಳಾದ ಕನ್ನಡಿಗರು ಎಲ್ಲರೊಂದಿಗೆ ಸಹಬಾಳ್ವೆ ನಡೆಸುತ್ತಾರೆ. ಹೊರಗಿನಿಂದ ಬಂದವರನ್ನು ಸಹಾನುಭೂತಿಯಿಂದ ನಡೆಸಿಕೊಳ್ಳುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಮಾತ್ರ ಎಲ್ಲ ವಿಷಯದಲ್ಲಿಯೂ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅನ್ಯಾಯ ಮಾಡುತ್ತಿದೆ. ಇದನ್ನು ಸರಿಪಡಿಸದಿದ್ದರೆ ಮುಂದೆ ಕನ್ನಡಿಗರು ತೊಂದರೆ ಅನುಭವಿಸಬೇಕಾಗುತ್ತದೆ ಎಂದರು.
ಚಾಮರಾಜ ಕ್ಷೇತ್ರದ ಶಾಸಕ ಕೆ.ಹರೀಶ್‌ಗೌಡ ಅವರು ಕನ್ನಡಾಂಬೆ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಮೈಸೂರು ನಗರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಟಿ.ವೀರೇಶ್, ಗ್ರಾಮಾಂತರ ನಿಯಂತ್ರಣ ಅಧಿಕಾರಿ ಶ್ರೀನಿವಾಸ್, ಸಿಎಸ್‌ಆರ್ ವ್ಯವಸ್ಥಾಪಕ ನಿರ್ದೇಶಕ ಚಂದ್ರಹಾಸ್, ಘಟಕ ವ್ಯವಸ್ಥಾಪಕರಾದ ಶ್ರೀನಿವಾಸ್, ಜವರೇಗೌಡ, ಕಿರಣ್, ಆನಂದ್ ಇತರರಿದ್ದರು.