ಹೂವಿನಹಡಗಲಿ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣಾ ನಡೆಸಲಾಯಿತು. ವೈದ್ಯರಾದ ನಿಖಿಲ್, ಸಂದೀಪ್, ಉಮೇಶ, ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಅಧ್ಯಕ್ಷ ಡಾ.ವೀರೇಶ, ಬಿಜೆಪಿ ಜಿಲ್ಲಾ ಪ್ರಕೋಷ್ಠ ಸಹ ಸಂಚಾಲಕ ಓದೋಗಂಗಪ್ಪ ಇತರರಿದ್ದರು. 
ಜಿಲ್ಲೆ

ಉತ್ತಮ ಜೀವನ ಶೈಲಿಗೆ ಆದ್ಯತೆ ನೀಡಿ

ರುದ್ರಪ್ಪ ವಾಲಿ

ಹೂವಿನಹಡಗಲಿ: ಒತ್ತಡದ ಜೀವನ ಶೈಲಿಯಿಂದ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು, ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು ಎಂದು ಡಾ.ರಶ್ಮಿ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್ ಹಾಗೂ ಜೆಸಿಐ ಮತ್ತು ತಾಲೂಕು ಸರ್ಕಾರಿ ಆಸ್ಪತ್ರೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬ ಮನುಷ್ಯನಿಗೆ ಮಾನಸಿಕ ಒತ್ತಡದಿಂದ ರಕ್ತದೊತ್ತಡ ಸೇರಿ ಇತರೆ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ.

60ವರ್ಷದ ನಂತರ ದೇಹದಲ್ಲಿ ಶಕ್ತಿ ಕಡಿಮೆಯಾಗುತ್ತಾ ಬರುತ್ತದೆ. ಅದಕ್ಕಾಗಿ ಉತ್ತಮ ಜೀವನ ಶೈಲಿ ಆರಂಭಿಸಬೇಕು. ಕಣ್ಣಿನ ದೃಷ್ಟಿಯನ್ನು ಸರಿಯಾಗಿ ಕಾಪಾಡಲು ಉತ್ತಮ ಆಹಾರ ಸೇವಿಸಬೇಕು ಎಂದರು. 38ಕ್ಕೂ ಹೆಚ್ಚು ಜನರಿಗೆ ತಪಾಸಣೆ ಮಾಡಲಾಯಿತು.