ವಕೀಲರ ಸಂ ಮಹಿಳಾ ದಿನಾಚರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಡಾ.ಚಿಳ್ಳಕೂರ್ ಸುಮಲತಾ ಉದ್ಘಾಟಿಸಿದರು.  
ಜಿಲ್ಲೆ

ಕಾನೂನು ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತಮ ಅವಕಾಶ

ವಿಜಯವಾಣಿ ಸುದ್ದಿಜಾಲ ಉಡುಪಿ

ಯಶಸ್ಸು ಸುಲಭದಲ್ಲಿ ಲಭಿಸುವುದಿಲ್ಲ. ಕಠಿಣ ಪರಿಶ್ರಮ, ಶ್ರದ್ಧೆಯಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಇತ್ತೀಚಿನ ದಿನಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸುತ್ತಿದ್ದಾಳೆ. ಕಾನೂನು ಕ್ಷೇತ್ರದಲ್ಲಿಯೂ ಮಹಿಳೆಯರಿಗೆ ಉತ್ತಮ ಅವಕಾಶಗಳಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಡಾ.ಚಿಳ್ಳಕೂರ್ ಸುಮಲತಾ ಹೇಳಿದರು.

ಉಡುಪಿ ವಕೀಲರ ಸಂ ವತಿಯಿಂದ ಶನಿವಾರ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಲರನ್ನೂ ಸಮಾನವಾಗಿ ಪ್ರೋತ್ಸಾಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಕಠಿಣ ಸವಾಲು ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಪುರುಷರ ಬಗ್ಗೆ ತಾರತಮ್ಯ ಧೋರಣೆ ಸಲ್ಲದು ಎಂದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಕಿರಣ್ ಎಸ್.ಗಂಗಣ್ಣನವರ್ ಅಧ್ಯಕ್ಷತೆ ವಹಿಸಿದ್ದರು. ವಕೀಲ ಎಸ್.ಬಸವರಾಜ್ ಮುಖ್ಯ ಅತಿಥಿಯಾಗಿದ್ದರು. ವಕೀಲರ ಸಂ ಪ್ರಧಾನ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರ ಬಹುಮಾhttps://www.vijayavani.net/womens-day-celebration-at-tallur-churchನ ವಿಜೇತರ ಪಟ್ಟಿಯನ್ನು ದೀಪಾ ಸುವರ್ಣ ವಾಚಿಸಿದರು. ವಕೀಲರ ಸಂ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮ ಸಂಚಾಲಕಿ ಲವೀನಾ ಫರ್ನಾಂಡಿಸ್ ವಂದಿಸಿದರು. ವಕೀಲೆ ಸಹನಾ ಕುಂದರ್ ನಿರೂಪಿಸಿದರು.