ಶಿವಮೊಗ್ಗ: ಭದ್ರಾವತಿಯ ಜೇಡಿಕಟ್ಟೆ ಬಳಿ ಬುಧವಾರ ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿಯ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡಿದ್ದು ರುಂಡ-ಮುಂಡ ಬೇರ್ಪಟ್ಟಿದೆ. ಭದ್ರಾವತಿ-ಶಿವಮೊಗ್ಗ ನಡುವಿನ ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.
ಟ್ರಾೃಕ್‌ಮನ್‌ಗಳು ಶಿವಮೊಗ್ಗ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿದ ಶಿವಮೊಗ್ಗ ರೈಲ್ವೆ ಪೊಲೀಸರು ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಮಧ್ಯಾಹ್ನ 3.30ರಿಂದ ಸಂಜೆ 5 ಗಂಟೆ ನಡುವೆ ರೈಲಿಗೆ ತಲೆಕೊಟ್ಟಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.