ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ
ಭಜನೆ ದೇವರನ್ನು ಒಲಿಸುವ ಸುಲಭ ಮಾರ್ಗ. ಭಗವನ್ನಾಮ ಸ್ಮರಣೆ ಎಲ್ಲರನ್ನೂ ಒಗ್ಗೂಡಿಸುತ್ತದೆ. ಭಜನೆ ಮನೆ ಮನಗಳನ್ನು ಬೆಳಗುವ ಸಾಧನವಾಗಿದ್ದು, ಮಕ್ಕಳಲ್ಲಿ ಜ್ಞಾಪಕ ಶಕ್ತಿ ವೃದ್ಧಿಸುತ್ತದೆ ಎಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ ಹೇಳಿದರು.
ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು, ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಕಡಬ ತಾಲೂಕು ಸಹಕಾರದಲ್ಲಿ 16ನೇ ವರ್ಷದ ಭಜನಾ ತರಬೇತಿ ಶಿಬಿರ ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಭಜನಾ ತರಬೇತಿ ಶಿಬಿರ ಸಂಚಾಲಕ ಲೋಕೇಶ್ ಬರೆಮೇಲು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಭಜನಾ ಪರಿಷತ್ ಸಮನ್ವಯಾಧಿಕಾರಿ ಸಂತೋಷ್ ಅಳಿಯೂರು, ಭಜನಾ ಮಂಡಳಿ ಅಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಪಂಜ ವಲಯ ಮೇಲ್ವಿಚಾರಕಿ ರೋಹಿಣಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ವಲಯ ಸಂಯೋಜಕಿ ಜಯಶ್ರೀ, ಭಜನಾ ತರಬೇತುದಾರರಾದ ನಳಿನಾಕ್ಷಿ ವಿ.ಆಚಾರ್ಯ ಕಲ್ಮಡ್ಕ ಉಪಸ್ಥಿತರಿದ್ದರು. ಯಶ್ವಿತಾ ಪಂಬೆತ್ತಾಡಿ ಪ್ರಾರ್ಥಿಸಿದರು. ಸವಿತಾ ಪಂಬೆತ್ತಾಡಿ ಸ್ವಾಗತಿಸಿದರು. ಭಜನಾ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್ ತೋಟ ನಿರೂಪಿಸಿದರು. ಮಧುಕರ ಕುದ್ವ ವಂದಿಸಿದರು.
ಭಜನಾ ತರಬೇತಿ ಮೇ 4ರ ತನಕ ನಡೆಯಲಿದ್ದು, ಅರ್ಧ ಏಕಾಹ ಭಜನಾ ಕಾರ್ಯಕ್ರಮ ಜರುಗಲಿದೆ. ಬೆಳಗ್ಗೆ 10.30ರಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ, ಸಂಜೆ 4ರಿಂದ ಸಮಾರೋಪ ಸಮಾರಂಭ ನಡೆಯಲಿದೆ.