ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ, ಕೃಷ್ಣಮಠದ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ರಾಜಾಂಗಣದಲ್ಲಿ ಜ. 29ರಂದು ಮಧ್ಯಾಹ್ನ 3.30ರಿಂದ 'ದಾಸ ಶ್ರೇಷ್ಠ ಶ್ರೀ ಪುರಂದರ ದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಸಹಸ್ರ ಕಂಠ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪರಿಷತ್ತಿನ ಭಜನಾ ತರಬೇತುದಾರೆ ವಿದುಷಿ ಉಷಾ ಹೆಬ್ಬಾರ್ ಹೇಳಿದರು.
ಶ್ರೀ ಪುತ್ತಿಗೆ ಮಠದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಜ.5ರಿಂದ ಪ್ರತಿ ಭಾನುವಾರ ಮಧ್ಯಾಹ್ನ 3.30ಕ್ಕೆ ರಥಬೀದಿ ಪುತ್ತಿಗೆ ಮಠದಲ್ಲಿ ನಡೆಯುವ ಭಜನಾ ತರಬೇತಿಯಲ್ಲಿ ಭಜನಾ ಮಂಡಳಿಗಳ ಸದಸ್ಯರು ಹಾಗೂ ಭಜಕರು ಭಾಗವಹಿಸಬೇಕು ಎಂದು ವಿನಂತಿಸಿದರು.
ಭಜನಾ ಪರಿಷತ್ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಬಸ್ರೂರು ಮಾತನಾಡಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ಸ್ವಪ್ನಾ ಪ್ರಕಾಶ್, ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಮುದ್ರಾಡಿ, ಶ್ರೀ ಪುತ್ತಿಗೆ ಮಠದ ರಘುಪತಿ ರಾವ್ ಕಿದಿಯೂರು, ಭಜನಾ ಮಂಡಳಿಯ ಸುಮನ ಆಚಾರ್ಯ ಉಪಸ್ಥಿತರಿದ್ದರು. ಭಜನಾ ಪರಿಷತ್ ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಸ್ವಾಗತಿಸಿದರು. ತಾಲೂಕು ಭಜನಾ ಪರಿಷತ್ ಉಪಾಧ್ಯಕ್ಷೆ ಸುಮಿತ್ರಾ ನಾಯ್ಕ್ ಪೆರಂಪಳ್ಳಿ ವಂದಿಸಿದರು.