ಬಂಟ್ವಾಳ: ಸಂಸ್ಕಾರ ಇದ್ದರೆ ಮಾತ್ರ ಜೀವನದ ಯೋಗ್ಯತೆ ಪಡೆಯಲು ಸಾಧ್ಯ. ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗ ಎಂದು ಬಂಟ್ವಾಳ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಪ್ರಕಾಶ್ ಕಾರಂತ್ ಹೇಳಿದರು.
ಬಂಟ್ವಾಳ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ನ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ತುಂಬೆ ವಲಯ ವತಿಯಿಂದ ಅಂತರ ಶ್ರೀ ಕೋದಂಡರಾಮ ಭಜನಾ ಮಂಡಳಿ ಸಹಯೋಗದೊಂದಿಗೆ ಶ್ರೀ ಕೋದಂಡರಾಮ ಭಜನಾ ಮಂಡಳಿ ಸಭಾಂಗಣದಲ್ಲಿ ಭಜನಾ ತರಬೇತಿ ಶಿಬಿರ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಉದ್ಯಮಿ ಸಂದೇಶ್ ಕುಮಾರ್ ಶೆಟ್ಟಿ ಅರೆಬೆಟ್ಟು ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮದ ಮೊದಲು ಮಕ್ಕಳು ತಾವು ಒಂದು ವಾರದಲ್ಲಿ ಕಲಿತ ಕುಣಿತ ಭಜನೆ ಪ್ರದರ್ಶಿಸಿದರು. ಭಜನೆ ತರಬೇತುದಾರರಾದ ಸಂದೇಶ್, ಗಗನ್, ಆಕಾಶ್ ಅವರನ್ನು ಗೌರವಿಸಲಾಯಿತು. ನರಿಕೊಂಬು ಗ್ರಾಪಂ ಅಧ್ಯಕ್ಷ ಸಂತೋಷ್‌ಕುಮಾರ್, ಸದಸ್ಯ ಕಿಶೋರ್ ಶೆಟ್ಟಿ ಅಂತರ, ಪ್ರಗತಿಪರ ಕೃಷಿಕ ಪ್ರೇಮನಾಥ್ ಶೆಟ್ಟಿ ಅಂತರ, ಕೋದಂಡರಾಮ ಭಜನಾ ಮಂದಿರ ಅಧ್ಯಕ್ಷ ಚಂದ್ರಶೇಖರ ಗೌಡ, ಮಹಿಳಾ ಮಂಡಳಿ ಅಧ್ಯಕ್ಷೆ ಭಾರತಿ, ಜಿಲ್ಲಾ ಯೋಜನಾಧಿಕಾರಿ ಪ್ರೇಮನಾಥ್ ಎಸ್.ಎಚ್, ಜಿಲ್ಲಾ ಭಜನಾ ಪರಿಷತ್ ಸಮನ್ವಯಾಧಿಕಾರಿ ಸಂತೋಷ್ ಅಳಿಯೂರು, ಭಜನಾ ಮಂಡಳಿ ಸದಸ್ಯ ಗಣೇಶ್ ಕುಮಾರ್ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆ ನರಿಕೊಂಬು ಎ ಒಕ್ಕೂಟ ಅಧ್ಯಕ್ಷ ಕೃಷ್ಣಪ್ಪ ಸಫಲ್ಯ ಸ್ವಾಗತಿಸಿದರು. ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿಗಳಾದ ಕುಸುಮಾವತಿ ಹಾಗೂ ಪ್ರತಿಭಾ ಸಹಕರಿಸಿದರು.