filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 44; 
ಜಿಲ್ಲೆ

ವಿಘ್ನ ನಿವಾರಕನಿಗೆ ಸಂಭ್ರಮದ ವಿದಾಯ

ಭಾಲ್ಕಿ: ಪಟ್ಟಣದಲ್ಲಿ ವಿಘ್ನ ನಿವಾರಕ ವಿನಾಯಕನಿಗೆ ಮಂಗಳವಾರ ಸಂಭ್ರಮದಿಂದ ವಿದಾಯ ಹೇಳಲಾಯಿತು. ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪಟ್ಟಣದ ವಿವಿಧ ಕಡೆಗಳಲ್ಲಿ ವಿವಿಧ ಗಣೇಶ ಮಂಡಳದಿಂದ ನೂರಕ್ಕೂ ಅಧಿಕ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.

ಕಳೆದ ಹನ್ನೊಂದು ದಿನಗಳಿಂದ ಪಟ್ಟಣದಲ್ಲಿ ಭಕ್ತಿಯ ವಾತಾವರಣ ನಿರ್ಮಾಣಗೊಂಡಿತು. ಎಲ್ಲೆಡೆ ವಿವಿಧ ಮಾದರಿಗಳಲ್ಲಿ ಬೃಹತ್ ಪೆಂಡಾಲ್ ನಿರ್ಮಿಸಿ ಶ್ರದ್ಧೆ, ಭಕ್ತಿಯಿಂದ ಗಣೇಶನಿಗೆ ಪೂಜೆ, ಪುನಸ್ಕಾರ ಸಲ್ಲಿಸಲಾಯಿತು. ಜತೆಗೆ ಹಲವೆಡೆ ಸಾಂಸ್ಕೃತಿಕ ಕಾರ್ಯಕ್ರಮ, ಅನ್ನದಾಸೋಹ ಮೂಲಕ ಉತ್ಸವ ತೆರೆ ಕಂಡಿತು.

ಗಣೇಶ್ ವಿಸರ್ಜನೆಗೂ ಮುನ್ನ ಗಣೇಶ ನ ಪೆಂಡಾಲ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪೂಜೆ ನೆರವೇರಿಸಿ ಭಕ್ತರಿಗೆ ಲಡ್ಡು ಪ್ರಸಾದ ವಿತರಿಸಿದರು.

ಗಣೇಶ ಮೂರ್ತಿಗಳನ್ನು ಪಟ್ಟಣದ ಹೊರವಲಯದಲ್ಲಿ ನಿರ್ಮಿಸಿದ ಕೃತಕ ಹೊಂಡದಲ್ಲಿ ವಿಸರ್ಜಿಸಲಾಯಿತು.

ಮೆರವಣಿಗೆಯುದ್ದಕ್ಕೂ ಯುವಕರು, ಮಹಿಳೆಯರು, ಮಕ್ಕಳು ಡಿಜೆ ಸೌಂಡ್ ನಲ್ಲಿ ಮೊಳಗಿದ ಭಕ್ತಿ, ಚಲನಚಿತ್ರ ಗೀತೆಗಳಿಗೆ ಹೆಜ್ಜೆ ಹಾಕಿದರು. ಯುವಕರು ಪರಸ್ಪರರ ಮೇಲೆ ಗುಲಾಲ್ ಎರಚಿಕೊಂಡು, ಸಿಳ್ಳೆ, ಕೇಕೆ ಹಾಕುತ್ತ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದರು. ಯುವಕರು ಸಿಡಿಸಿದ ಬಗೆ ಬಗೆಯ ಪಟಾಕಿಗಳು ಆಕಾಶದಲ್ಲಿ ಬಣ್ಣ ಬಣ್ಣದ ಚಿತ್ತಾರ ಮೂಡಿಸಿ ನೋಡುಗರನ್ನು ಆಕರ್ಷಿಸಿದವು. ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.