ಜಿಲ್ಲೆ

ಸ್ನಾತಕೋತ್ತರ ಕೇಂದ್ರಕ್ಕೆ ಯತ್ನ

Chitradurga

ಭರಮಸಾಗರ: ದಾವಣಗೆರೆ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳೊಂದಿಗೆ ಚರ್ಚಿಸಿ ಕೆಲ ದಿನಗಳಲ್ಲೇ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಜಿ ಸೆಂಟರ್ ಆರಂಭಿಸಲಾಗುವುದು ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಶನಿವಾರ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದರು.

ಈ ಹಿಂದಿನ ಅವಧಿಯಲ್ಲಿ 10 ಎಕರೆ ಜಮೀನು ಖರೀದಿಸಿ ಸುಸಜ್ಜಿತ ಕಾಲೇಜು ಕಟ್ಟಡ ನಿರ್ಮಿಸಲಾಗಿತ್ತು. ಇಲ್ಲಿ ನಿರ್ಮಾಣಗೊಂಡ ಐಟಿಐ ಕಾಲೇಜು ಜಿಲ್ಲೆಯಲ್ಲೇ ಪ್ರಥಮವಾಗಿತ್ತು. ಇದರ ನಿರ್ವಹಣೆ, ಅಭಿವೃದ್ಧಿಗಾಗಿ ಈಗ ಹೆಚ್ಚುವರಿ 1.53 ಲಕ್ಷ ರೂ. ನೀಡಲಾಗಿದೆ ಎಂದು ತಿಳಿಸಿದರು.

ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ದೊರೆಯದಿರುವ ವಿಚಾರ ತಿಳಿದಿದೆ. ಈ ಬಗ್ಗೆ ಮಾ.2ರಿಂದ ಆರಂಭವಾಗುವ ಸದನದಲ್ಲಿ ಚರ್ಚಿಸಿ ಎಲ್ಲರಿಗೂ ಲ್ಯಾಪ್‌ಟಾಪ್ ಕೊಡುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
ಜಿಪಂ ಸದಸ್ಯ ಡಿ.ವಿ.ಶರಣಪ್ಪ, ತಾಪಂ ಸದಸ್ಯ ಎನ್.ಕಲ್ಲೇಶ್, ಕೋಗುಂಡೆ ಮಂಜುನಾಥ್, ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್ ಕುಮಾರ್, ಶಶಿಕುಮಾರ್, ಎನ್.ಟಿ.ಬಸವರಾಜ್, ನಿವೃತ್ತ ಇಂಜಿನಿಯರ್ ಚಂದ್ರಶೇಖರ್, ಶಿವಬಸವಯ್ಯ, ಪ್ರಾಂಶುಪಾಲ ಡಾ.ಆರ್.ಮಹೇಶ್ ಮತ್ತಿತರರಿದ್ದರು.