ಶಿರಸಿ; ಭಾರತ ಸೇವಾದಳವು ದೇಶ ಪ್ರೇಮ ಬೆಳೆಸುವಲ್ಲಿ ಅವಿರತವಾಗಿ ಶ್ರಮಿಸುತ್ತಿದೆ. ಅದು ದೇಶ ಪ್ರೇಮದ ಪ್ರತೀಕ ಎಂದು ಕಲ್ಲಿಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲೆ ಗಿರಿಜಾ ಪೂಜಾರಿ ಅಭಿಪ್ರಾಯಪಟ್ಟರು.
ಶಿರಸಿ ತಾಲೂಕಿನ ಕಲ್ಲಿಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶನಿವಾರ ಭಾರತ ಸೇವಾದಳ ಆಯೋಜಿಸಿದ್ದ ರಾಷ್ಟ›ಧ್ವಜ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ಸೇವಾದಳದ ತಾಲೂಕು ಸಮಿತಿ ಅಧ್ಯಕ್ಷ ಅಶೋಕ ಭಜಂತ್ರಿ ಮಾತನಾಡಿ, ನಮ್ಮ ದೇಶ, ನಮ್ಮ ಧ್ವಜದ ಬಗ್ಗೆ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕಿದೆ ಎಂದರು.
ಭಾರತ ಸೇವಾ ದಳದ ಜಿಲ್ಲಾ ಸಂಘಟಕ ರಾಮಚಂದ್ರ ಹೆಗಡೆ ರಾಷ್ಟ› ಧ್ವಜದ ಬಗ್ಗೆ ವಿವರವಾಗಿ ತಿಳಿಸಿದರು. ಶಾಲೆಯ ದೈಹಿಕ ಶಿಕ್ಷಕ ಮನೋಹರ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಂಗ್ಲ ಶಿಕ್ಷಕಿ ದೀಪಾ ಸ್ವಾಗತಿಸಿದರು. ಓಂಕಾರ ಗೌಡರ ನಿರೂಪಿಸಿದರು. ರಾಜೇಶ್ವರಿ ವಂದಿಸಿದರು. ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.