ಜಿಲ್ಲೆ

ಮನೆಯಲ್ಲಿದ್ದ ಇಲೆಕ್ಟ್ರಾನಿಕ್ಸ್ ವಸ್ತು ಸುಟ್ಟು ಭಸ್ಮ

ವಿರೂಪಾಕ್ಷಯ್ಯ ಗುದ್ನಯ್ಯನವರಮಠ

ಭಟ್ಕಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಇಲೆಕ್ಟ್ರಾನಿಕ್ಸ್ ವಸ್ತುಗಳು, ಕಪಾಟುಗಳು ಸುಟ್ಟು ಕರಕಲಾದ ಘಟನೆ ಭಾನುವಾರ ಸಂಭವಿಸಿದೆ. ಪಟ್ಟಣದ ಮಖ್ದೂಮ್ ಕಾಲನಿಯ ಮುಬಸ್ಶಿರಾ ಯೂಸುಫ್ ಂಬುವರ ಮನೆಯಲ್ಲಿ ಅವಘಡ ಸಂಭವಿಸಿದೆ. ಘಟನೆ ನಡೆದ ಸಮಯದಲ್ಲಿ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ. ಹಿಂದಿನ ದಿನ ಎಲ್ಲರೂ ಸಂಬಂಧಿಕರ ಮನೆಗೆ ಹೋಗಿದ್ದರು ಎಂದು ಹೇಳಲಾಗಿದೆ. ಮನೆಯಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಬೆಂಕಿ ನಂದಿಸಲು ತೆರಳಿದರು. ಮೊದಲು ಮನೆಯಿಂದ ಗ್ಯಾಸ್ ಸಿಲಿಂಡರ್ ತೆಗೆದು ಪಂಪ್‌ಸೆಟ್ ಮೋಟಾರ್ ಬಳಸಿ ಬೆಂಕಿ ನಿಯಂತ್ರಿಸಿದರು. ಮಾಹಿತಿ ಪಡೆದ ಹೆಸ್ಕಾಂ, ಪೊಲೀಸ್, ಕಂದಾಯ ಇಲಾಖೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.