ಜಿಲ್ಲೆ

ಭಟ್ಕಳ ಮಾರಿ ಜಾತ್ರೆ ಸಂಪನ್ನ

ಭಟ್ಕಳ: ಎರಡು ದಿನಗಳಿಂದ ಪಟ್ಟಣದಲ್ಲಿ ವಿಜೃಂಭಣೆಯಿಂದ ಜರುಗುತ್ತಿದ್ದ ತಾಲೂಕಿನ ಸುಪ್ರಸಿದ್ಧ ಮಾರಿ ಹಬ್ಬ ಸಾವಿರಾರು ಭಕ್ತರ ಹಷೋದ್ಗಾರದ ಮಧ್ಯೆ ಗುರುವಾರ ಸಂಜೆ ಮಾರಿ ಮೂರ್ತಿ ವಿಸರ್ಜಿಸುವ ಮೂಲಕ ಸಂಪನ್ನಗೊಂಡಿತು.

ದೇವಿಯ ಮೂರ್ತಿಯನ್ನು ನಗರದ ಮಾರಿಗುಡಿಯಿಂದ ಸಾವಿರಾರು ಭಕ್ತರು, ಸ್ವಯಂಸೇವಕರು, ಆಡಳಿತ ಮಂಡಳಿ ಸದಸ್ಯರುಗಳು ಸೇರಿ ಮೆರವಣಿಗೆ ಮೂಲಕ ಜಾಲಿಕೋಡಿಯ ಸಮುದ್ರ ತೀರಕ್ಕೆ ಸಂಜೆ 4 ಗಂಟೆ ಸುಮಾರಿಗೆ ಒಯ್ದು ಅಲ್ಲಿ ಮೂರ್ತಿಯ ಭಾಗಗಳನ್ನು ಬೇರ್ಪಡಿಸಿ ಸಮುದ್ರದಲ್ಲಿ ವಿಸರ್ಜಿಸಲಾಯಿತು.

ನಾಮಧಾರಿ ಸಮಾಜದ ಅಧ್ಯಕ್ಷ ಕೃಷ್ಣಾ ನಾಯ್ಕ ಆಸರಕೇರಿ, ಕಾಂಗ್ರೆಸ್ ಪ್ರಮುಖ ವಿಠಲ ನಾಯ್ಕ, ಸಂತೋಷ ನಾಯ್ಕ, ಬಿಜೆಪಿ ಮಂಡಲಾಧ್ಯಕ್ಷ ಸುಬ್ರಾಯ ದೇವಾಡಿಗ, ಕಾಸ್ಕಾರ್ಡ್ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಈಶ್ವರ ನಾಯ್ಕ, ಎಸಿ ಡಾ. ನಯನಾ ಹಾಗೂ ಸದ್ಭಕ್ತರು ದೇವಿಯ ದರ್ಶನ ಪಡೆದರು.

ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪರಮೇಶ್ವರ ನಾಯ್ಕ, ನರೇಂದ್ರ ನಾಯಕ, ಶ್ರೀಧರ ನಾಯ್ಕ, ಶ್ರೀಪಾದ ಕಂಚುಗಾರ,ನಾರಾಯಣ ಖಾರ್ವಿ, ಮಾದೇವ ಮೊಗೇರ, ರಘುವೀರ ಬಾಳಗಿ, ದಿನೇಶ ನಾಯ್ಕ, ಕೃಷ್ಣ ನಾಯ್ಕ, ನಾರಾಯಣ ಖಾರ್ವಿ, ಗೋವಿಂದ ನಾಯ್ಕ, ಇತರರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಹೆಚ್ಚುವರಿ ಎಸ್ಪಿ ಸಿ.ಟಿ. ಜಯಕುಮಾರ ನೇತೃತ್ವದಲ್ಲಿ ಸಿಪಿಐ ಶ್ರೀಕಾಂತ ಮಾರ್ಗದರ್ಶನದಲ್ಲಿ ಪಿಎಸ್​ಐ ಕುಡಗಂಟಿ, ಎಎಸ್​ಐ ನವೀನ ಬೋರ್ಕರ್, ಇತರ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.