ಜಿಲ್ಲೆ

ಪ್ರಾದೇಶಿಕ ಸೇನೆಗೆ ನಿಯೋಜನೆಗೊಂಡ ಭವ್ಯಾ ನರಸಿಂಹಮೂರ್ತಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ವಕ್ತಾರೆ ಹಾಗೂ ಸೋಶಿಯಲ್‌ ಮೀಡಿಯಾ ವಿಭಾಗದಲ್ಲಿ ಪ್ರಮುಖ ಸ್ಥಾನದಲ್ಲಿದ್ದ ಭವ್ಯಾ ನರಸಿಂಹಮೂರ್ತಿ ದೇಶದ ಟೆರಿಟರಿಯಲ್‌ ಆರ್ಮಿಗೆ ನಿಯೋಜನೆಗೊಂಡಿದ್ದಾರೆ.

ಕಾಂಗ್ರೆಸ್‌ನ ವಕ್ತಾರೆಯಾಗಿ ಜನರಿಗೆ ಪರಿಚಯರಾಗಿದ್ದ ಭವ್ಯಾ ನರಸಿಂಹಮೂರ್ತಿ ಈಗ ಲೆಫ್ಟಿನೆಂಟ್‌ ಭವ್ಯಾ ನರಸಿಂಹ ಮೂರ್ತಿಯಾಗಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ, ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ನಿಯೋಜನೆಗೊಂಡಿದ್ದಾರೆ.

ಪ್ರತಿಕ್ರಿಯಿಸಿದ ಭವ್ಯ ನರಸಿಂಹಮೂರ್ತಿ, ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದೇನೆ. ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಮಾಡುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶ ಕರೆದಾಗ ಗಡಿಯಲ್ಲಿ ದೇಶದ ರಕ್ಷಣೆ ಮಾಡಲೂ ಸಿದ್ಧಳಿದ್ದೇನೆ ಎಂದಿದ್ದಾರೆ.