ಜಿಲ್ಲೆ

ಭೀಮಾ ಕೋರೆಗಾಂವ ವಿಜಯೋತ್ಸವ

ವಿಜಯವಾಣಿ ಸುದ್ದಿಜಾಲ ಧಾರವಾಡ

ಬಿ.ಆರ್. ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ತಾಲೂಕು ಘಟಕದಿಂದ ಜ. 12ರಂದು ಅಮ್ಮಿನಭಾವಿ ಗ್ರಾಮದಲ್ಲಿ 207ನೇ ಭೀಮಾ ಕೋರೆಗಾಂವ ವಿಜಯೋತ್ಸವ ಆಚರಣೆ ಸಮಾರಂಭ ಆಯೋಜಿಸಲಾಗಿದೆ ಎಂದು ಡಿಎಸ್‌ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಚಲವಾದಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ ಧಾಮುಲ್ ನಿರ್ದೇಶಕಿ ಶಿವಲೀಲಾ ಕುಲಕರ್ಣಿ ಕಾರ್ಯಕ್ರಮ ಉದ್ಘಾಟಿಸುವರು. ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಎಡಿಎಸ್‌ಎಸ್ ರಾಜ್ಯಾಧ್ಯಕ್ಷ ಮಾರುತಿ ದೊಡಮನಿ, ಮುಖಂಡರಾದ ಮಂಜುನಾಥ ಮಕ್ಕಳಗೇರಿ, ತವನಪ್ಪ ಅಷ್ಟಗಿ ಪಾಲ್ಗೊಳ್ಳುವರು ಅತಿಥಿಗಳಾಗಿ ಎಂದರು.

ಶ0ಕರ ಪಾತರದ, ವಿನೋದ ಕಾಳೆ, ಅರುಣ ಅಮ್ಮಿನಭಾವಿ, ಅಕ್ಷಯ ಕೊಂಡ್ಲಿ ಸುದ್ದಿಗೋಷ್ಠಿಯಲ್ಲಿದ್ದರು.