ಯಳಂದೂರು: ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಯಳಂದೂರು ಕ್ಷೇತ್ರದ (ಪರಿಶಿಷ್ಟ ಪಂಗಡ) ನಿರ್ದೇಶಕರಾಗಿ ಭೀಮಪ್ಪ ಅವಿರೋಧ ಆಯ್ಕೆಯಾಗಿದ್ದಾರೆ. ಚುನಾವಣೆ ಪ್ರಕ್ರಿಯೆಯಲ್ಲಿ ಭೀಮಪ್ಪ ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯೂ ಆದ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಸುಭಾಷಿಣಿ ಅವಿರೋಧ ಆಯ್ಕೆ ಪ್ರಕಟಿಸಿದರು.