ಜಿಲ್ಲೆ

ಉಡುಪಿಯ ಎಲ್ಲ ಕೆರೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ...

ಶಾಸಕ ಯಶ್​ಪಾಲ್​ ಸುವರ್ಣ ಭರವಸೆ

ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಎಲ್ಲ ಕೆರೆಗಳನ್ನೂ ಅಭಿವೃದ್ಧಿಪಡಿಸಿ ಅಂತರ್ಜಲ ಮಟ್ಟ ಕಾಯ್ದುಕೊಳ್ಳಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ನಂತರದ ದಿನಗಳಲ್ಲಿ ಕೆರೆಗಳ ಸುತ್ತ ವಾಕಿಂಗ್​ ಟ್ರ್ಯಾಕ್​ ಹಾಗೂ ಆಸನಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದು ಶಾಸಕ ಯಶ್​ಪಾಲ್​ ಸುವರ್ಣ ಭರವಸೆ ನೀಡಿದರು.

ಉಡುಪಿ ನಗರಸಭಾ ವ್ಯಾಪ್ತಿಯ ಒಳಕಾಡು ವಾರ್ಡ್​ನಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಮಜಲು ಕೆರೆಯ ಅಭಿವೃದ್ಧಿ ಹಾಗೂ ಸೌಂದಯೀರ್ಕರಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ್​ ಪೂಜಾರಿ, ಉಪಾಧ್ಯೆ ರಜನಿ ಹೆಬ್ಬಾರ್​, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್​ ಕಲ್ಮಾಡಿ, ಸ್ಥಳಿಯ ಪ್ರಮುಖರಾದ ನಾಗೇಶ್​ ಹೆಗ್ಡೆ, ಸರ್ವಜ್ಞ ರಾವ್​, ಮಂಜುನಾಥ ಹೆಬ್ಬಾರ್​ ಹಾಗೂ ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು.