ಜಿಲ್ಲೆ

ಪ್ರಾಣಿ ಪ್ರಯೋಗಾಲಯ ನಿರ್ಮಾಣಕ್ಕೆ ಸಚಿವರಿಂದ ಭೂಮಿ ಪೂಜೆ

ಮಡಿಕೇರಿ: ಪಶುಪಾಲನಾ ಇಲಾಖೆಯಿಂದ ನಿರ್ಮಿಸಲು ಉದ್ದೇಶಿಸಿರುವ ಪ್ರಾಣಿ ಪ್ರಯೋಗಾಲಯ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮತ್ತು ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪರವರು ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.


ಕಟ್ಟಡ ಮತ್ತು ಯಂತ್ರೋಪಕರಣ ಸೇರಿದಂತೆ ಸುಮಾರು ೧೮೧ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರಾಣಿ ಪ್ರಯೋಗಾಲಯ ಸಂಸ್ಥೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿದರು.


ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಲಿಂಗರಾಜು ದೊಡ್ಡಮನಿ ಮಾತನಾಡಿ, ಪ್ರಾಣಿಗಳಿಗೆ ಬರುವ ಸಾಂಕ್ರಾಮಿಕ ಕಾಯಿಲೆಗಳಿಗೆ ಬೇಕಾಗುವ ಲಸಿಕೆ ದಾಸ್ತಾನು ಮಾಡುವುದು. ವಿಷಕಾರಿ ಸಸ್ಯಗಳಿಂದ ಬರುವ ಕಾಯಿಲೆಗಳ ತಪಾಸಣೆ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ಮಾಹಿತಿ ನೀಡಿದರು.


ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪಾಲಿಕ್ಲೀನಿಕ್ ಉಪ ನಿರ್ದೇಶಕ ಡಾ.ಸಿ.ಪಿ.ತಿಮ್ಮಯ್ಯ, ಪಾಲಿಕ್ಲೀನಿಕ್ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಚಿದಾನಂದ, ಇತರರು ಇದ್ದರು.