ಫೆಡರೇಷನ್ ಆಫ್ ಕೊಡವ ಸಮಾಜದ ಅಭಿವೃದ್ಧಿ ಕಾಮಗಾರಿಗೆ ಸುಜಾ ಕುಶಾಲಪ್ಪ ಹಾಗೂ ಎ.ಎಸ್.ಪೊನ್ನಣ್ಣ ಭೂಮಿಪೂಜೆ ನೆರವೇರಿಸಿದರು. ವಿಷ್ಣು ಕಾರ್ಯಪ್ಪ ಮತ್ತಿತರರು ಇದ್ದರು.  
ಜಿಲ್ಲೆ

ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಶಿವಶಂಕರ್ ಎಂ. ಹೆಬ್ಬಳ್ಳ

ವಿರಾಜಪೇಟೆ : ಇಲ್ಲಿನ ಬಾಳುಗೋಡು ಗ್ರಾಮದಲ್ಲಿರುವ ಫೆಡರೇಷನ್ ಆಫ್ ಕೊಡವ ಸಮಾಜದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಎಂಎಲ್ಸಿ ಸುಜಾ ಕುಶಾಲಪ್ಪ ಸೋಮವಾರ ಭೂಮಿಪೂಜೆ ನೆರವೇರಿಸಿದರು.
ಫೆಡರೇಷನ್ ಆಫ್ ಕೊಡವ ಸಮಾಜ ಬಾಳುಗೋಡು ಆವರಣದಲ್ಲಿ 10 ಕೋಟಿ ರೂ. ಅನುದಾನದಲ್ಲಿ ಹಮ್ಮಿಕೊಂಡಿರುವ 6 ಅಭಿವೃದ್ಧಿ ಕಾಮಾಗಾರಿಗಳಿಗೆ ಪೂಜೆ ನೆರೆವೆರಿತು. ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಫೆಡರೇಶನ್ ಆಫ್ ಕೊಡವ ಸಮಾಜವು ಸರ್ಕಾರಕ್ಕೆ ನೀಡಿರುವ ಕ್ರಿಯಾ ಯೋಜನೆಯ ಅನ್ವಯ ಸರ್ಕಾರದಿಂದ ಬಂದಿರುವ ಅನುದಾನವನ್ನು ಬಳಕೆ ಮಾಡಿಕೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಲಿವೆ. ಕೊಡವ ಪದ್ಧತಿ, ಆಚಾರ ವಿಚಾರಗಳ ಬಗ್ಗೆ ಮಾಹಿತಿ ದೊರಕಲು ಸುಸಜ್ಜಿತ ವಸ್ತು ಸಂಗ್ರಹಾಲಯ, ಯೋಧ ಸ್ಮಾರಕ ರಿಪೇರಿ, ತಡೆಗೋಡೆ ನಿರ್ಮಾಣ, ಕ್ರೀಡಾಂಗಣದ ಸುತ್ತ ತಡೆಗೊಡೆ, ಅಡುಗೆ ಮನೆ ರಿಪೇರಿ, ಭೋಜನಾಲಯ ವಿಸ್ತರಣೆ, ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ನಡೆಸಲಾಗುವುದು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಂಡು ನಿರ್ಮಾಣ ಕಾರ್ಯ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮಾತನಾಡಿದರು. ಫೆಡರೇಷನ್ ಆಫ್ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ, ನಿರ್ದೇಶಕರು, ಸದಸ್ಯರು ಮತ್ತು ಕಟ್ಟಡ ಕಾಮಗಾರಿ ಮೇಲುಸ್ತುವಾರಿ ಸಮಿತಿ ಸದಸ್ಯರು ಹಾಜರಿದ್ದರು.