ಜಿಲ್ಲೆ

ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡಕ್ಕೆ ಭೂಮಿ ಪೂಜೆ


ಆಲೂರು : ತಾಲೂಕಿನ ಪಾಳ್ಯ ಹೋಬಳಿಯ ತಾಳೂರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕಾಮಗಾರಿಗೆ ಜೆಡಿಎಸ್ ಮುಖಂಡ ಕೆ.ಎಸ್.ಮಂಜೇಗೌಡ ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಿದರು.


ನಂತರ ಮಾತನಾಡಿದ ಅವರು, ಸ್ವಾವಲಂಬಿಯಾಗಿ ಜೀವನ ನಡೆಸಲು ಹೈನುಗಾರಿಕೆ ಸಹಕಾರಿಯಾಗುತ್ತದೆ. ಹೈನುಗಾರಿಕೆಯಿಂದ ಬಡ ಕುಟುಂಬಗಳು ನೆಮ್ಮದಿಯಾಗಿ ಜೀವನ ಸಾಗಿಸಲು ಸಾಧ್ಯ ಎಂದರು.


ಹಾಲು ಉತ್ಪಾದಕರ ಸಹಕಾರ ಸಂಘದ ವಿಸ್ತರಣಾಧಿಕಾರಿ ಪುಟ್ಟರಾಜು ಮಾತನಾಡಿದರು. ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪಿ.ಎಲ್.ಲಿಂಗರಾಜು, ತಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್, ಡೇರಿ ಅಧ್ಯಕ್ಷ ಜಿ.ಕೆ.ವೆಂಕಟೇಶ್, ಕಾರ್ಯದರ್ಶಿ ಧರ್ಮ, ಪಿಡಿಒ ಮಂಜುನಾಥ್ ಇತರರು ಇದ್ದರು.