ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿಪೂಜೆ ನೆರವೇರಿಸಿದರು. ಶಂಕರ ಹೂಗಾರ ಮತ್ತಿತರರಿದ್ದಾರೆ. 
ಜಿಲ್ಲೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

ಗಿರೀಶ ಸಗರ

ವಿಜಯಪುರ : ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು.

2023&24ನೇ ಸಾಲಿನ ಎಸ್​ಸಿಪಿ/ಟಿಎಸ್​ಪಿ ಯೋಜನೆಯಡಿ 5 ಕೋಟಿ ರೂ. ಅನುದಾನದಲ್ಲಿ ಯೋಗ ಕೇಂದ್ರ ನಿರ್ಮಾಣ, ತರಗತಿ ಕೊಠಡಿ, ಶೌಚಗೃಹ ಬ್ಲಾಕ್​ ಸೇರಿದಂತೆ ಮುಂತಾದ ಕಟ್ಟಡಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ನಂತರ ಶಾಸಕ ಯತ್ನಾಳ, ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿ ವೀಣೆ ಮಾಡಿದರು.