ಜಿಲ್ಲೆ

ಭ್ರಮರಾಂಬ ಮಲ್ಲಿಕಾರ್ಜುನಸ್ವಾಮಿ ರಥೋತ್ಸವ ಅದ್ದೂರಿ

ಮಾನ್ವಿ: ಪಟ್ಟಣದ ಐತಿಹಾಸಿಕ ಬೆಟ್ಟದ ಭ್ರಮರಾಂಬ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಶುಕ್ರವಾರ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ದೇವಸ್ಥಾನದಲ್ಲಿ ಮಹಾರುದ್ರಾಭಿಷೇಕ ಸೇರಿ ವಿಶೇಷ ಪೂಜೆಗಳು ನಡೆದವು. ಮಲ್ಲಿಕಾರ್ಜುನ ಸ್ವಾಮಿಗೆ ಅಕ್ಕಿ ಕಿರೀಟದ ಅಲಂಕಾರ, ಮಹಾನಂದಿ ಮೂರ್ತಿ ಹಾಗೂ ಆಂಜನೇಯಸ್ವಾಮಿಗೆ ಪೂಜೆ ಸಲ್ಲಿಸಲಾಯಿತು. ಸಂಜೆ ಪಲ್ಲಕ್ಕಿ, ನಂದಿಕೋಲು ಸೇವೆಯೊಂದಿಗೆ ರಥೋತ್ಸವ ನಡೆಯಿತು. ದೇವಸ್ಥಾನದ ಅರ್ಚಕರು ಭಕ್ತರಿಗೆ ದಾಸೋಹ ವ್ಯವಸ್ಥೆ ಮಾಡಿದ್ದರು.