ಮಂಗಳೂರು: ಈ ವರ್ಷದ ಭ್ರಾಮರಿ ಯಕ್ಷವೈಭವ ಕಾರ್ಯಕ್ರಮ ಆ.1ರಂದು ಮಂಗಳೂರಿನ ಪುರಭವನದಲ್ಲಿ ಸಂಜೆ 7ರಿಂದ ಮರುದಿನ ಮುಂಜಾನೆಯವರೆಗೆ ಜರಗಲಿದೆ.
ಈ ಕಾರ್ಯಕ್ರಮದಲ್ಲಿ ಸಮಾಜದ ಗಣ್ಯರು ಹಾಗೂ ಕಲಾಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಹಿರಿಯ ಕಲಾವಿದ ಕೆ.ಎಚ್ .ದಾಸಪ್ಪ ರೈ ಅವರಿಗೆ ಭ್ರಾಮರೀ ಯಕ್ಷಮಣಿ ಪ್ರಶಸ್ತಿ, ನೇಪಥ್ಯಕಲಾವಿದ ಮೋನಪ್ಪ ಗೌಡ ಹಾಗೂ ಮುಡಿಪು ಕುರ್ನಾಡಿನ ಶ್ರೀ ದತ್ತಾತ್ರೇಯ ಯಕ್ಷಗಾನ ಮತ್ತು ಭಜನಾ ಮಂಡಳಿಗೆ ಭ್ರಾಮರೀ ಯಕ್ಷಸೇವಾ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸಭಾಕಾರ್ಯಕ್ರಮದ ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಅಂಭಾಶಪಥ, ಲಕ್ಷ್ಮೀ ಸ್ವಯಂವರ,ತಾಮ್ರದ್ವಜ ಕಾಳಗ ಎಂಬ ಪೌರಾಣಿಕ ಪ್ರಸಂಗ ಉಚಿತವಾಗಿ ಪ್ರದರ್ಶನಗೊಳ್ಳಲಿದೆ ಎಂದು ಟ್ರಸ್ಟ್‌ನ ಪತ್ರಿಕಾ ಪ್ರಕಟಣೆ ತಿಳಿಸಿದೆ.