ಹೆಬ್ರಿ: ಚಾರ ಕೆರೆಬೆಟ್ಟು ಕಳ್ತರೂರಿನ ಇತಿಹಾಸ ಪ್ರಸಿದ್ಧ ಮೇಲ್ಬೇಟ್ಟು ಶ್ರೀ ಬ್ರಹ್ಮಬೈದರ್ಕಳ ಮತ್ತು ಶಿವರಾಯ ಗರಡಿಯು 5 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಶನಿವಾರ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಭೂಮಿಪೂಜೆ ನೆರವೇರಿತು.
ಗರಡಿಯು ಶಿಲಾಮಯವಾಗಿ ನಿರ್ಮಾಣವಾಗಲಿದ್ದು, ಇದಕ್ಕಾಗಿ ಸರ್ವರ ಸಹಕಾರ ಅಗತ್ಯ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮನವಿ ಮಾಡಿದರು.
ಸುಬ್ರಹ್ಮಣ್ಯ ಹೇರಳೆ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಆನುವಂಶಿಕ ಮೊಕ್ತೇಸರ ಸುರೇಶ ಹೆಗ್ಡೆ ತಾರಾಳಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಬಿ.ಹರ್ಷ ಶೆಟ್ಟಿ ಹುತ್ತುರ್ಕೆ, ಪ್ರಧಾನ ಕಾರ್ಯದರ್ಶಿ ಪ್ರಸನ್ನ ಕುಮಾರ್ ಶೆಟ್ಟಿ, ಕೊಶಾಧಿಕಾರಿ ರಮಾಕಾಂತ್ ಕಾಮತ್, ಗರಡಿ ಪೂಜಾರಿ ವರ್ಗದ ಲಕ್ಷ್ಮಣ ಪೂಜಾರಿ, ಸುಧಾಕರ ಪೂಜಾರಿ, ಪ್ರಚಾರ ಮತ್ತು ಆರ್ಥಿಕ ಸಮಿತಿಯ ಅಧ್ಯಕ್ಷ ಚಾರ ವಾದಿರಾಜ ಶೆಟ್ಟಿ ಪ್ರಮುಖರು ಭಾಗವಹಿಸಿದ್ದರು.