ತಂದ್ರೆಗುಡಿ ಕೊಪ್ಪಲು ಗ್ರಾಮದಲ್ಲಿ ಹಾರಂಗಿ ನಾಲಾ ಸೇವಾರಸ್ತೆ ಅಭಿವೃದ್ಧಿ ಕಾಮಗಾರಿಗೆ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು. 
ಜಿಲ್ಲೆ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಮಾದೇಶ್ ತಿ.ನರಸೀಪುರ

ಬೆಟ್ಟದಪುರ: ಸಮೀಪದ ತಂದ್ರೆಗುಡಿ ಕೊಪ್ಪಲು ಗ್ರಾಮದಲ್ಲಿ ಬುಧವಾರ ಹಾರಂಗಿ ನಾಲಾ ಸೇವಾ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಭೂಮಿಪೂಜೆ ನೆರವೇರಿಸಿದರು.

ಬಳಿಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಮತ್ತು ಸಾರ್ವಜನಿಕರಿಂದ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಬಗೆಹರಿಸುವಂತೆ ಸೂಚಿಸಿದರು.

ಆಶ್ರಯ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜನ್ ಬಾಬು, ತಾಪಂ ಮಾಜಿ ಸದಸ್ಯೆ ಸರಸ್ವತಿ, ಮೈಮುಲ್ ನಿರ್ದೇಶಕ ಪ್ರಕಾಶ್, ಮುಖಂಡರಾದ ಭೀಮಣ್ಣ, ಪುಟ್ಟರಾಜು, ರಾಜೇಗೌಡ, ಚಂದ್ರೇಗೌಡ, ಪುಟ್ಟರಾಜೆಗೌಡ, ತಹಸೀಲ್ದಾರ್ ನಿಸರ್ಗ ಪ್ರಿಯಾ, ಲೋಕೋಪಯೋಗಿ ಎಇಇ ವೆಂಕಟೇಶ್ ಇತರರು ಇದ್ದರು.