ಜಿಲ್ಲೆ

ರಕ್ತೇಶ್ವರಿ ಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆ

ಸುಬ್ರಹ್ಮಣ್ಯ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಕ್ತೇಶ್ವರಿ ಕಟ್ಟೆ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನಡೆಯಿತು. ದೇಗುಲದ ಎದುರಿನ ಚಾವಡಿಯ ಹತ್ತಿರ ಇರುವ ರಕ್ತೇಶ್ವರಿ ಸಾನ್ನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಬಳಿಕ ಭೂಮಿಪೂಜೆ ನೆರವೇರಿತು. ರಕ್ತೇಶ್ವರಿ ಕಟ್ಟೆ ಮತ್ತು ಆವರಣ ಗೋಡೆ ನಿರ್ಮಾಣ ಕೆಲಸ ಆರಂಭಿಸಲಾಯಿತು.

ದೇವಳದ ಪ್ರಧಾನ ಅರ್ಚಕ ರಾಮಚಂದ್ರ ಭಟ್ ವೈದಿಕ ಕಾರ್ಯಕ್ರಮ ನೆರವೇರಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.