ಮೈಸೂರು: ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಮನಸೋಇಚ್ಛೆ ಇರಿದು ಕೊಂದ ಪತಿ ಪೊಲೀಸರಿಗೆ ಶರಣಾಗಿದ್ದಾನೆ.
ಮೈಸೂರಿನ ಜಯದೇವನಗರದಲ್ಲಿ ವಾಸವಿದ್ದ ಒಡಿಶಾ ಮೂಲದ ಕಾವೇರಿ ಗಡಾಯಿ(40) ಕೊಲೆಯಾದವರು. ಪತಿ ಪ್ರಮೋದ್ ಕುಮಾರ್ ಜನಾ (43) ಪೊಲೀಸರಿಗೆ ಶರಣಾಗಿದ್ದಾನೆ.
ವಲಸೆ ಕಾರ್ಮಿಕರಾದ ಈ ದಂಪತಿ 6 ತಿಂಗಳ ಹಿಂದೆ ಹರಿಯಾಣದಿಂದ ಮೈಸೂರಿಗೆ ಬಂದು ನೆಲೆಸಿದ್ದರು. ಜೆ.ಕೆ.ಟೈರ್ಸ್‌ನಲ್ಲಿ ಗುತ್ತಿಗೆ ಕಾರ್ಮಿಕನಾಗಿದ್ದ ಪ್ರಮೋದ್ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಶಂಕಿಸುತ್ತಿದ್ದ. ಮಂಗಳವಾರ ರಾತ್ರಿಯೂ ಗಲಾಟೆ ಮಾಡಿದ್ದ. ನಂತರ ಪತ್ನಿಗೆ ಚಾಕುವಿನಿಂದ ಇರಿದು ಕೊಂದು ಮೇಟಗಳ್ಳಿ ಪೊಲೀಸರಿಗೆ ಶರಣಾಗಿದ್ದಾನೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.