ಜಿಲ್ಲೆ

ನಾಡದೇವಿಗೆ ಪೂಜೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ

ಬಾಬುರಾವ ಯಡ್ರಾಮಿ

ವಿಜಯವಾಣಿ ಸುದ್ದಿಜಾಲ ಕಲಬುರಗಿ

ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಶಾಲೆಯ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು 68 ನೆಯ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ‌ದರು.

ತಾಯಿ‌ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಆರತಿ ಬೆಳಗಿ ಪೂಜೆ ಸಲ್ಲಿಸಿದ ಸಚಿವರು ನಾಡಿನ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು. ಶಾಸಕರು ಹಾಗೂ ಅಧಿಕಾರಿಗಳು ಇದ್ದರು.