ಬೀದರ್ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮುನೀಶ್ ಮೌದ್ಗಿಲï ಬುಧವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಡಿಸಿ ಗೋವಿಂದರಡ್ಡಿ, ಜಿಪಂ ಸಿಇಒ ಶಿಲ್ಪಾ ಎಂ. ಇದ್ದರು. 
ಜಿಲ್ಲೆ

ಜನರೊಂದಿಗೆ ಸಮನ್ವಯ ಅತ್ಯಗತ್ಯ

ರಾಜು ಯಮಕನಮರಡಿ

ಬೀದರ್: ಜನರೊಂದಿಗೆ ಅಧಿಕಾರಿಗಳು ಮಾಹಿತಿ ವಿನಿಮಯ ಮಾಡಿಕೊಳ್ಳುವುದರಿಂದ ಸರ್ಕಾರದ ಯೋಜನೆಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸಾಧ್ಯ. ಹೀಗಾಗಿ ಅಧಿಕಾರಿಗಳು ಗ್ರಾಮೀಣ ಭಾಗಕ್ಕೆ ಭೇಟಿ ನೀಡಿದಾಗ ಜನರೊಂದಿಗೆ ಮಾತಾಡಿ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಅಧಿಕಾರಿಗಳು ಗ್ರಾಮೀಣ ಭಾಗಕ್ಕೆ ಭೇಟಿ ನೀಡಿದಾಗ ಸಾರ್ವಜನಿಕರಿಂದ ಮಾಹಿತಿ ಪಡೆಯಲು ಸರಳವಾದ ನಮೂನೆ ಸಿದ್ಧಪಡಿಸಬೇಕು. ಹಳ್ಳಿಗರು ಹಳ್ಳಿಗಳಲ್ಲಿರುವ ಸಮಸ್ಯೆಗಳನ್ನು ಗಮನಕ್ಕೆ ತಂದರೆ ಪರಿಹಾರ ಒದಗಿಸಬಹುದು ಎಂದರು.

ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ವರದಿಯನ್ನು ವಿಶೇಷವಾಗಿ ಪರಿಗಣಿಸಿ ನಾವು ನೀಡುವ ಯಾವುದೇ ವರದಿಗೆ ಹೆಚ್ಚಿನ ಒತ್ತು ನೀಡುತ್ತಾರೆ. ಹಾಗಾಗಿ ಅಧಿಕಾರಿಗಳು ತಮ್ಮ ಜಿ¯್ಲೆಯ ಯಾವುದೇ ಸಮಸ್ಯೆ ಮತ್ತು ಸಲಹೆ-ಸೂಚನೆಗಳನ್ನು ನಮಗೆ ನೀಡಿ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಪ್ರೌಢಶಾಲೆ ಮುಖ್ಯಗುರುಗಳಿಗೆ ಆಡಳಿತದ ಬಗ್ಗೆ ತರಬೇತಿ ನೀಡಲು ಕಾರ್ಯಾಗಾರ ಆಯೋಜಿಸಬೇಕು ಎಂಬ ಕೋರಿಕೆಗೆ ಪ್ರತಿಕ್ರಿಯಿಸಿದ ಮೌದ್ಗಿಲ್, ಆದಷ್ಟು ಬೇಗ ಕ್ರಮ ವಹಿಸಲಾಗುವುದು ಎಂದರು.

ಜಿಲ್ಲಾಧಿಕಾರಿ ಗೋವಿಂದರಡ್ಡಿ ಮಾತನಾಡಿ, ಅಧಿಕಾರಿಗಳು ತಮಗೆ ವಹಿಸಿದ ಕೆಲಸವನ್ನು ಸರಿಯಾಗಿ ಮಾಡಬೇಕು. ಸರ್ಕಾರದ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಕಂಡು ಬಂದರೆ ತಕ್ಷಣ ನಮ್ಮ ಗಮನಕ್ಕೆ ತರಬೇಕು. ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ಹೋಬಳಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಿದ್ದು, ಅವರು ಆಸ್ಪತ್ರೆ, ಅಂಗನವಾಡಿ ಕೇಂದ್ರ, ವಸತಿ ನಿಲಯಗಳಿಗೆ ಭೇಟಿ ನೀಡಿ ಸ್ಥಿತಿಗತಿ ಕುರಿತು ಮಾಹಿತಿ ನೀಡುತ್ತಿದ್ದಾರೆ ಎಂದು ಡಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ತಿಳಿಸಿದರು.

ಜಿಪಂ ಸಿಇಒ ಶಿಲ್ಪಾ ಎಂ., ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಬೀದರ್ ಹಾಗೂ ಬಸವಕಲ್ಯಾಣ ಸಹಾಯಕ ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ಸುರೇಖಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಸಲೀಂ ಪಾಶಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿಂಧು, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಸದಾಶಿವ ಬಡಿಗೇರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಇತರರಿದ್ದರು.

ಗ್ರಾಮೀಣ ಮಟ್ಟದಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಬೇಕು. ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳು ಸರಿಯಾದ ರೀತಿಯಲ್ಲಿ ಜನರಿಗೆ ತಲುಪುವಂತೆ ಗಮನಹರಿಸಬೇಕು.
| ಮುನೀಶ್ ಮೌದ್ಗಿಲ್